ಹುಬ್ಬಳ್ಳಿ: ಹಾನಗಲ್ ಕ್ಷೇತ್ರದ ಅಭಿವೃದ್ಧಿಗೆ ₹ 2,400 ಕೋಟಿ ನೀಡಿರುವುದಾಗಿ ಹೇಳಿರುವ ಸಿದ್ದರಾಮಯ್ಯ, ಈ ಹಣವನ್ನು ಯಾವುದಕ್ಕೆ ಕೊಟ್ಟಿದ್ದಾರೆ ಎನ್ನುವುದನ್ನು ಬಹಿರಂಗಪಡಿಸಲಿ. ಹಾವೇರಿ ಜಿಲ್ಲೆಯ ಅಭಿವೃದ್ಧಿಗೆ ನಾವೇನು ಕೊಟ್ಟಿದ್ದೇವೆ ಎನ್ನುವುದನ್ನು ಕ್ಷೇತ್ರದ ಮತದಾರರ ಮುಂದೆಯೇ ಹೇಳುವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿರುಗೇಟು ನೀಡಿದರು.

ಹಾನಗಲ್ ಕ್ಷೇತ್ರದ ಉಪಚುನಾವಣೆ ಪ್ರಚಾರಕ್ಕೆ ತೆರಳುವ ಮುನ್ನ ಭಾನುವಾರ ಇಲ್ಲಿನ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ಸಿಂದಗಿ ಹಾಗೂ ಹಾನಗಲ್ ಎರಡೂ ಕ್ಷೇತ್ರದಲ್ಲಿ ಹೆಚ್ಚು ಸಮಯ ಕೊಟ್ಟು ಇಂದಿನಿಂದ ಪ್ರಚಾರ ಮಾಡುತ್ತೇನೆ. ನಮ್ಮ ಅಭ್ಯರ್ಥಿಗಳು ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಪೆಟ್ರೋಲ್ ಮೇಲಿನ ತೆರಿಗೆ ಕಡಿಮೆ ಮಾಡುವಿರಾ ಎನ್ನುವ ಪ್ರಶ್ನೆಗೆ ಉಪ ಚುನಾವಣೆ ಬಳಿಕ ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಅವಲೋಕಿಸಲಾಗುವುದು. ನಂತರ ಈ ಕುರಿತು ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಸಂಗೂರ ಸಕ್ಕರೆ ಕಾರ್ಖಾನೆಯನ್ನು ಬಿಜೆಪಿಯವರು ಮುಳುಗಿಸಿದರು ಎನ್ನುವ ಕಾಂಗ್ರೆಸ್ ಟೀಕೆಗೆ, ಈ ಸಕ್ಕರೆ ಕಾರ್ಖಾನೆಗೆ ತನ್ನದೇ ಆದ ಇತಿಹಾಸವಿದೆ. ಕಾರ್ಖಾನೆ ಮುಳುಗಿಸುವುದರಲ್ಲಿ ಕಾಂಗ್ರೆಸ್ ಪಾತ್ರ ಬಹಳ ದೊಡ್ಡದಿದೆ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.