ಶುಕ್ರವಾರ, ಅಕ್ಟೋಬರ್ 23, 2020
22 °C

ಮಗಳನ್ನು ಕಣಕ್ಕಿಳಿಸಲು ಹನುಮಂತರಾಯಪ್ಪ ಯತ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಐಎಎಸ್ ಅಧಿಕಾರಿಯಾಗಿದ್ದ ದಿವಂಗತ ಡಿ.ಕೆ. ರವಿ ಪತ್ನಿ ಕುಸುಮಾ ಅವರನ್ನು ಆರ್‌.ಆರ್‌. ನಗರ ಕ್ಷೇತ್ರದಿಂದ ಕಣಕ್ಕಿಳಿಸ ಬಯಸಿರುವ ಅವರ ತಂದೆ ಹನುಮಂತರಾಯಪ್ಪ, ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಗುರುವಾರ ಸಂಜೆ ಭೇಟಿ ಮಾಡಿ ಮಾತುಕತೆ ನಡೆಸಿದರು.

ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಹನುಮಂತರಾಯಪ್ಪ ಬುಧವಾರ ಭೇಟಿ ಮಾಡಿ ಮಾತುಕತೆ ನಡೆಸಿದ್ದರು. ಕುಸುಮಾ ಅವರು ಆರ್‌.ಆರ್‌. ನಗರ ಕ್ಷೇತ್ರದಿಂದ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಆದರೆ, ಜೆಡಿಎಸ್‌ನಿಂದ ಸ್ಪರ್ಧಿಸುತ್ತಾರೊ, ಕಾಂಗ್ರೆಸ್‌ ಅಭ್ಯರ್ಥಿ ಆಗುತ್ತಾರೊ ಎಂಬ ಕುತೂಹಲ ಮೂಡಿದೆ. ಮಗಳು ಜೆಡಿಎಸ್‌ನಿಂದ ಕಣಕ್ಕಿಳಿದರೆ ಬೆಂಬಲ ನೀಡುವಂತೆ ಕಾಂಗ್ರೆಸ್‌ ನಾಯಕರಲ್ಲಿ ಹನುಮಂತರಾಯಪ್ಪ ಮನವಿ ಮಾಡಿದ್ದಾರೆ. ಡಿ.ಕೆ. ಶಿವಕುಮಾರ್ ಮತ್ತು ಡಿ.ಕೆ. ಸುರೇಶ್ ಜೊತೆಗೆ ಈ ವಿಷಯದ ಬಗ್ಗೆ ಚರ್ಚೆ ಮಾಡಿದ್ದಾರೆ.‌ ಆದರೆ, ಅದಕ್ಕೆ ಸಹೋದರರಿಬ್ಬರೂ ಸಕಾರಾತ್ಮಕವಾಗಿ ಸ್ಪಂದಿಸಿಲ್ಲ ಎಂದು ಗೊತ್ತಾಗಿದೆ.

ಈ ಮಧ್ಯೆ, ವಿಜಯನಗರದಲ್ಲಿರುವ ಆದಿ ಚುಂಚನಗಿರಿ ಶಾಖಾ ಮಠಕ್ಕೆ ಗುರುವಾರ ಭೇಟಿ ನೀಡಿದ ಕುಸುಮಾ ಅವರು, ನಿರ್ಮಲಾನಂದನಾಥ ಶ್ರೀಗಳಿಂದ ಆಶೀರ್ವಾದ ಪಡೆದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು