ಭಾನುವಾರ, ಅಕ್ಟೋಬರ್ 2, 2022
21 °C

'ಹರ್ ಘರ್ ತಿರಂಗಾ' ರ‍್ಯಾಲಿ: ಈಶ್ವರಪ್ಪ,  ಸಂಸದ ರಾಘವೇಂದ್ರ ಸ್ಕೂಟರ್ ಸವಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಬಿಜೆಪಿಯಿಂದ ನಗರದಲ್ಲಿ ಸೋಮವಾರ ಆಯೋಜಿಸಿದ್ದ ಹರ್ ಘರ್ ತಿರಂಗಾ ಬೈಕ್ ರ್ಯಾಲಿಗೆ ಶಾಸಕ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು.

ಈ ವೇಳೆ ಈಶ್ವರಪ್ಪ ಸ್ಕೂಟರ್ ಚಲಾಯಿಸಿದರೆ ಸಂಸದ ಬಿ.ವೈ.ರಾಘವೇಂದ್ರ ಹಿಂದೆ ಕುಳಿತು ತ್ರಿವರ್ಣ ಧ್ವಜ ಹಿಡಿದು ಸಾಗಿದರು. ಈಶ್ವರಪ್ಪ ಹೆಲ್ಮೆಟ್ ಧರಿಸದೇ ಸ್ಕೂಟರ್ ಚಲಾಯಿಸಿದ್ದು ವಿಶೇಷವಾಗಿತ್ತು.

ನಗರದ ಎಂಆರ್ ಎಸ್ ವೃತ್ತದಲ್ಲಿ ಸ್ಕೂಟರ್ ರ್ಯಾಲಿಗೆ ಚಾಲನೆ ದೊರೆಯಿತು. ಮಳೆಯ ನಡುವೆಯೇ ಮಹಿಳೆಯರು ಸೇರಿದಂತೆ ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ದ್ವಿಚಕ್ರ ವಾಹನಗಳಲ್ಲಿ ಸಾಗಿಬಂದರು.

ಹರ್ ಘರ್ ತಿರಂಗಾ, ವಂದೇ ಮಾತರಂ, ಭಾರತ್ ಮಾತಾಕಿ ಜೈ ಘೋಷಣೆ ಮೊಳಗಿದವು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು