ಕುಶಾಲನಗರ: ‘ಜಿಲ್ಲೆಯ ಪ್ರಮುಖ ಪ್ರವಾಸಿ ತಾಣ ಹಾರಂಗಿ ಜಲಾಶಯ ವೀಕ್ಷಣೆಗೆ ಪ್ರವಾಸಿಗರಿಗೆ ನ.16 ರಿಂದ ಮುಕ್ತ ಅವಕಾಶ ಕಲ್ಪಿಸಲಾಗಿದೆ’ ಎಂದು ನೀರಾವರಿ ಇಲಾಖೆಯ ಅಣೆಕಟ್ಟು ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಹೇಂದ್ರ ಕುಮಾರ್ ತಿಳಿಸಿದ್ದಾರೆ.

ಪ್ರವಾಸಿ ತಾಣಗಳ ವೀಕ್ಷಣೆಗೆ ಸರ್ಕಾರ ಅವಕಾಶ ಮಾಡಿಕೊಟ್ಟಿತ್ತು. ಆದರೆ, ಜಲಾಶಯದ ಭದ್ರತೆ ದೃಷ್ಟಿಯಿಂದ ಪ್ರವಾಸಿಗರ ವೀಕ್ಷಣೆಗೆ ನಿರ್ಬಂಧ ವಿಧಿಸಲಾಗಿತ್ತು. ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳ ವೀಕ್ಷಣೆಗೆ ದೂರದ ಊರುಗಳಿಂದ ಬರುತ್ತಿದ್ದ ಪ್ರವಾಸಿಗರು ನಿರಾಸೆಯಿಂದ ಹಿಂತಿರುಗುತ್ತಿದ್ದರು. ಸರ್ಕಾರದ ಮಾರ್ಗಸೂಚಿಯನ್ನು ಪಾಲಿಸುವ ಮೂಲಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಭೇಟಿ ನೀಡಲು ಸಮ್ಮತಿ ನೀಡಲಾಗಿದೆ’ ಎಂದು ತಿಳಿಸಿದರು.

‘ಲಾಕ್ಡೌನ್ನಿಂದ ಬಿಕೋ ಎನ್ನುತ್ತಿದ್ದ ಪ್ರವಾಸಿ ತಾಣಗಳಲ್ಲಿ ಇದೀಗ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಹೆಚ್ಚಾಗುತ್ತಿದೆ. ಜೊತೆಗೆ ಪ್ರವಾಸಿ ತಾಣ ವ್ಯಾಪ್ತಿಯಲ್ಲಿ ವ್ಯಾಪಾರ ನಡೆಸುತ್ತಿದ್ದ ಸಣ್ಣ ಪುಟ್ಟ ಅಂಗಡಿ ವ್ಯಾಪಾರಿಗಳಿಗೂ ಸಂತೋಷ ಉಂಟಾಗಿದೆ. ಹಾರಂಗಿ ಜಲಾಶಯ ಮುಂಭಾಗದಲ್ಲಿ ಹೊಸದಾಗಿ ಉದ್ಯಾನ ನಿರ್ಮಾಣ ಮಾಡಿ, ಅದರ ವೀಕ್ಷಣೆಗೆ ಎಲ್ಲರಿಗೂ ಉಚಿತ ಪ್ರವೇಶಾವಕಾಶವನ್ನು ಕಲ್ಪಿಸಲಾಗಿತ್ತು. ಸೋಮವಾರದಿಂದ ಹಾರಂಗಿ ಉದ್ಯಾನ ಹಾಗೂ ಸಂಗೀತ ಕಾರಂಜಿ ವೀಕ್ಷಣೆಗೆ ಒಬ್ಬರಿಗೆ ₹10 ಪ್ರವೇಶ ಶುಲ್ಕ ನಿಗದಿಪಡಿಸಲಾಗಿದೆ. ಇದರ ನಿರ್ವಹಣೆಯನ್ನು ಖಾಸಗಿ ಸಂಸ್ಥೆ ನೀಡಲಾಗಿದೆ’ ಎಂದರು.

ಸೋಮವಾರ ಬೆಳಿಗ್ಗೆ 9.30ಕ್ಕೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಉದ್ಯಾನ ವೀಕ್ಷಣೆಗೆ ಚಾಲನೆ ನೀಡಲಿದ್ದಾರೆ. ನೀರಾವರಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ರಾಜೇಗೌಡ, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಹೇಂದ್ರಕುಮಾರ್, ಸಹಾಯಕ ಎಂಜಿನಿಯರ್ ನಾಗರಾಜು ಮತ್ತಿತರರು ಪಾಲ್ಗೊಳ್ಳಲಿದ್ದಾರೆ ಎಂದು ಇಲಾಖಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಹಾರಂಗಿ ಜಲಾಶಯ ವೀಕ್ಷಣೆಗೆ ಪ್ರವಾಸಿಗರಿಗೆ ಅವಕಾಶ ಕಲ್ಪಿಸಿರುವುದು ಸಂತಸ ತಂದಿಗೆ’ ಎಂದುಕೂಡುಮಂಗಳೂರು ಮುಖಂಡ ಭಾಸ್ಕರ್ ನಾಯಕ್ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.