ಶುಕ್ರವಾರ, ಮೇ 20, 2022
19 °C
ಸಚಿವರು, ಸಂಸದರು, ಶಾಸಕರ ವಿರುದ್ಧ ರಿಟ್‌ ಅರ್ಜಿ

ದ್ವೇಷ ಭಾಷಣ: ಜನಪ್ರತಿ ನಿಧಿಗಳ ವಿರುದ್ಧ ಕ್ರಮಕ್ಕೆ ಕೋರಿ ಹೈಕೋರ್ಟ್‌ಗೆ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಮುಸ್ಲಿಮರ ಜೊತೆ ವ್ಯಾಪಾರ ನಡೆಸದಂತೆ ಹಿಂದೂಗಳನ್ನು ಪ್ರಚೋದಿಸಿ ಉದ್ದೇಶಪೂರ್ವಕವಾಗಿ ಅಸಹ್ಯಕರ ಮತ್ತು ದ್ವೇಷದ ಮಾತುಗಳನ್ನು ಆಡುತ್ತಿರುವ ಜನಪ್ರತಿ ನಿಧಿಗಳ ವಿರುದ್ಧ ಕೂಡಲೇ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ತಕ್ಕ ಕ್ರಮ ಕೈಗೊಳ್ಳುವಂತೆ ಕೇಂದ್ರ ಮತ್ತು ಸರ್ಕಾರಕ್ಕೆ ನಿರ್ದೇಶಿಸಬೇಕು‘ ಎಂದು ಕೋರಿ ಹೈಕೋರ್ಟ್‌ಗೆ ರಿಟ್‌ ಅರ್ಜಿ ಸಲ್ಲಿಸಲಾಗಿದೆ.

ಈ ಕುರಿತಂತೆ ಮಂಡ್ಯ ಜಿಲ್ಲೆಯ ನಾಗ ಮಂಗಲದ ಖಲೀಮುಲ್ಲಾ ಸಲ್ಲಿಸಿರುವ ಅರ್ಜಿಯನ್ನು ತುರ್ತಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಅರ್ಜಿದಾರರ ಪರ ವಕೀಲ ರಹಮತ್‌ ಉಲ್ಲಾ ಕೊತ್ವಾಲ್‌,  ಮುಖ್ಯ ನ್ಯಾಯಮೂರ್ತಿ ಋತುರಾಜ್‌ ಅವಸ್ಥಿ ನೇತೃತ್ವದ ವಿಭಾಗೀಯ ನ್ಯಾಯ ಪೀಠಕ್ಕೆ ಶುಕ್ರವಾರ ಮನವಿ ಮಾಡಿದರು.

ಆದರೆ, ಈ ಮನವಿ ನಿರಾಕರಿಸಿದ ನ್ಯಾಯಪೀಠ, ‘ಎಂದಿನಂತೆಯೇ ಪ್ರಕ ರಣ ವಿಚಾರಣೆಗೆ ನಿಗದಿಯಾಗಲಿ‘ ಎಂದು ಸೂಚಿಸಿದರು. ರಾಜ್ಯ ಸರ್ಕಾ ರದ ಮುಖ್ಯ ಕಾರ್ಯದರ್ಶಿ, ಗೃಹ ಮತ್ತು ಕಾನೂನು ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು, ಅಲ್ಪ ಸಂಖ್ಯಾತರ ಆಯೋಗದ ಕಾರ್ಯದರ್ಶಿ, ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿ ವಾಲಯದ ಕಾರ್ಯದರ್ಶಿ ಮತ್ತು ರಾಜ್ಯ ಡಿಜಿ– ಐಜಿಗಳನ್ನು ಪ್ರತಿವಾದಿಗಳನ್ನಾಗಿ ಕಾಣಿಸಲಾಗಿದೆ.

‘ಅರ್ಜಿಯಲ್ಲಿ ಕಾಣಿಸಿರುವ ಜನಪ್ರತಿನಿಧಿಗಳ ವಿರುದ್ಧ ಪ್ರತಿವಾದಿಗಳು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಸೂಕ್ತ ಕಾನೂನು ಕ್ರಮ ಜರುಗಿಸಲು ನಿರ್ದೇಶಿಸಬೇಕು‘ ಎಂದು ಅರ್ಜಿದಾರರು ಕೋರಿದ್ದಾರೆ.

ಅರ್ಜಿಯಲ್ಲಿ ಏನಿದೆ?: ‘ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಸಂಸದ ಪ್ರತಾಪ ಸಿಂಹ, ತೇಜಸ್ವಿ ಸೂರ್ಯ, ರಾಜ್ಯದ ಸಚಿವ ಕೆ.ಎಸ್.ಈಶ್ವರಪ್ಪ, ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ, ಸಿ.ಟಿ.ರವಿ, ಎಂ.ಪಿ.ರೇಣುಕಾಚಾರ್ಯ, ಹಿಂದೂಪರ ಸಂಘಟನೆಯ ಋಷಿ ಕುಮಾರ ಸ್ವಾಮೀಜಿ (ಕಾಳಿಸ್ವಾಮಿ), ಶ್ರೀರಾಮ ಸೇನೆ ಮುಖಂಡ ಪ್ರಮೋದ ಮುತಾಲಿಕ, ಯುವ ಬ್ರಿಗೇಡ್‌
ಸಂಘಟನೆ ಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಮತ್ತಿ ತರರು ಮುಸ್ಲಿಂ ಸಮುದಾಯದ ವಿರುದ್ಧದ್ವೇಷ ಭಾಷಣ ಮಾಡುತ್ತಿದ್ದಾರೆ’ ಎಂದು ಆರೋಪಿಸಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು