ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೈಸೂರು ವಕೀಲರ ಸಂಘಕ್ಕೆ ಹೈಕೋರ್ಟ್‌ ನೋಟಿಸ್

Last Updated 15 ಡಿಸೆಂಬರ್ 2020, 21:01 IST
ಅಕ್ಷರ ಗಾತ್ರ

ಬೆಂಗಳೂರು: ಸಿಎಎ ಹಾಗೂ ಎನ್‌ಆರ್‌ಸಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆ ವೇಳೆ ‘ಫ್ರೀ ಕಾಶ್ಮೀರ್’ ಎಂಬ ಭಿತ್ತಿಪತ್ರ ಪ್ರದರ್ಶಿಸಿದ ಆರೋಪದಲ್ಲಿ ಬಂಧನಕ್ಕೆ ಒಳಗಾದ ವಿದ್ಯಾರ್ಥಿನಿ ನಳಿನ ಬಾಲಕುಮಾರ್ ಪರ ವಕಲಾತ್ತು ವಹಿಸದಂತೆ ಕೈಗೊಂಡ ನಿರ್ಣಯಕ್ಕೆ ಸಂಬಂಧಿಸಿದಂತೆ ಮೈಸೂರು ವಕೀಲರ ಸಂಘಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಸಂಘದ ನಿರ್ಣಯ ಪ್ರಶ್ನಿಸಿ ವಕೀಲ ಎಲ್.ರಮೇಶ್ ನಾಯಕ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಅರ್ಜಿಯಲ್ಲಿ ಪ್ರತಿವಾದಿಗಳಾದ ಕರ್ನಾಟಕ ರಾಜ್ಯ ವಕೀಲರ ಪರಿಷತ್ ಹಾಗೂ ಮೈಸೂರು ಜಿಲ್ಲಾ ವಕೀಲರ ಸಂಘಕ್ಕೆ ನೋಟಿಸ್ ಜಾರಿಗೊಳಿಸಿ, ಆಕ್ಷೇಪಣೆ ಸಲ್ಲಿಸುವಂತೆ ಸೂಚಿಸಿತು.

ಯಾವುದೇ ಆರೋಪಿ ಪರ ವಕಲಾತ್ತು ಹಾಕಬಾರದು ಎಂದು ನಿರ್ಣಯ ತೆಗೆದುಕೊಳ್ಳುವುದು ಸುಪ್ರೀಂ ಕೋರ್ಟ್ ನಿರ್ದೇಶನಕ್ಕೆ ವಿರುದ್ಧವಾಗಿದೆ. ಆದ್ದರಿಂದ ಆರೋಪಿ ವಿದ್ಯಾರ್ಥಿನಿ ಪರ ವಕಾಲತ್ತು ಹಾಕಬಾರದು ಎಂದು ನಿರ್ಣಯ ತೆಗೆದುಕೊಂಡಿದ್ದರೆ, ಅದರ ಪ್ರತಿಯನ್ನು ನ್ಯಾಯಾಲಯಕ್ಕೆ ಸಲ್ಲಿಸುವಂತೆ ಮೈಸೂರು ಜಿಲ್ಲಾ ವಕೀಲರ ಸಂಘಕ್ಕೆ ನಿರ್ದೇಶನ ನೀಡಿದ ನ್ಯಾಯಪೀಠ ವಿಚಾರಣೆಯನ್ನು ಜ.19ಕ್ಕೆ ಮುಂದೂಡಿತು.

2020 ಜ.8ರಂದು ನಡೆದ ಪ್ರತಿಭಟನೆಯಲ್ಲಿ ‘ಫ್ರೀ ಕಾಶ್ಮೀರ್’ ಭಿತ್ತಿಪತ್ರ ಪ್ರದರ್ಶಿಸಿದ ಸಂಬಂಧ ನಳಿನಿ ವಿರುದ್ಧ ದೋಶದ್ರೋಹ ಪ್ರಕರಣ ದಾಖಲಾಗಿದೆ. ನಳಿನಿ ವಿರುದ್ಧ ಯಾರೂ ವಕಾಲತ್ತು ವಹಿಸಬಾರದು ಎಂದು ಜ.16ರಂದು ಮೈಸೂರು ಜಿಲ್ಲಾ ವಕೀಲರ ಸಂಘ ನಿರ್ಣಯ ಕೈಗೊಂಡಿದೆ. ವಕಲತ್ತು ವಹಿಸಲು ಮುಂದಾದ ಕೆಲ ವಕೀಲರನ್ನು ಸಂಘದಿಂದ ಅಮಾನತುಗೊಳಿಸಲಾಗಿದೆ. ಮೈಸೂರು ಜಿಲ್ಲಾ ಸಂಘದ ವಿರುದ್ಧ ಸೂಕ್ರ ಕ್ರಮ ಕೈಗೊಳ್ಳುವಂತೆ ರಾಜ್ಯ ವಕೀಲರ ಪರಿಷತ್ತಿಗೆ ನಿರ್ದೇಶನ ನೀಡಬೇಕು ಎಂದು ಪೀಠಕ್ಕೆ ಮನವಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT