ಶನಿವಾರ, ಜೂನ್ 19, 2021
28 °C

ಕಾಮೆಡ್‌–ಕೆ ಪರೀಕ್ಷೆ ಮುಂದೂಡಲು ಹೈಕೋರ್ಟ್ ನಕಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಆ.19ರಂದು ನಿಗದಿಯಾಗಿರುವ ಕಾಮೆಡ್-ಕೆ ಪರೀಕ್ಷೆ ಮುಂದೂಡಲು ಹೈಕೋರ್ಟ್ ನಿರಾಕರಿಸಿದೆ.

ಕೋವಿಡ್ ಕಾರಣದಿಂದ ಪರೀಕ್ಷೆ ಮುಂದೂಡುವಂತೆ ಕೋರಿ ವಕೀಲ ಅಬ್ದುಲ್ ಮನ್ನನ್ ಖಾನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಬಿ.ವಿ.ನಾಗರತ್ನ ನೇತೃತ್ವದ ವಿಭಾಗೀಯ ಪೀಠ, ಪ್ರವೇಶ ಪರೀಕ್ಷೆ ವಿಷಯದಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿತು.

ಎಸ್‌ಎಸ್‌ಎಲ್‌ಸಿ ಮತ್ತು ಸಿಇಟಿ ಪರೀಕ್ಷೆಗಳು ನಡೆದಿವೆ. ಕಾಮೆಡ್‌–ಕೆ ಪರೀಕ್ಷೆ ಈಗಾಗಲೇ ವಿಳಂಬವಾಗಿದೆ. ಪರೀಕ್ಷೆ ವೇಳೆ ಎಲ್ಲಾ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಕಾಮೆಡ್‌–ಕೆಗೆ ಪೀಠ ನಿರ್ದೇಶನ ನೀಡಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು