ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ರೂಪಾ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು: ಏನಿದು ಪ್ರಕರಣ?

Last Updated 15 ಜೂನ್ 2022, 20:36 IST
ಅಕ್ಷರ ಗಾತ್ರ

ಬೆಂಗಳೂರು: ಐಪಿಎಸ್‌ ಅಧಿಕಾರಿ ಡಿ.ರೂಪಾ ವಿರುದ್ಧನಿವೃತ್ತ ಡಿಜಿಪಿ ಎಚ್.ಎನ್. ಸತ್ಯನಾರಾಯಣ ರಾವ್ ದಾಖಲಿಸಿದ್ದ ಮಾನನಷ್ಟ ಮೊಕದ್ದಮೆ ಯನ್ನು ಹೈಕೋರ್ಟ್ ರದ್ದುಪಡಿಸಿದೆ.

ಈ ಸಂಬಂಧ ಡಿ.ರೂಪಾ ಸಲ್ಲಿಸಿದ್ದಕ್ರಿಮಿನಲ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದ್ದು,ವಿಚಾರಣಾ ನ್ಯಾಯಾಲಯದಲ್ಲಿನ ಪ್ರಕರಣ ರದ್ದುಪಡಿಸಿ ಆದೇಶಿಸಿದೆ.

‘ದೂರುದಾರ ಸತ್ಯನಾರಾಯಣ ರಾವ್ ಅವರು ರೂಪಾ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಸಕ್ಷಮ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆದಿಲ್ಲ. ರೂಪಾ ಅವರು ಸತ್ಯ ನಾರಾಯಣ್ ರಾವ್ ವಿರುದ್ಧ ಭ್ರಷ್ಟಾ ಚಾರದ ಆರೋಪ ಮಾಡಿ ಇಲಾಖೆಯ ಮುಖ್ಯಸ್ಥರಿಗೆ ಬರೆದಿರುವ ಪತ್ರವು ಅಧಿಕೃತ ಕರ್ತವ್ಯ ನಿರ್ವಹಣೆಯ ಭಾಗವಾಗಿದೆ. ಹೀಗಾಗಿ, ಪ್ರಕರಣದ ವಿಚಾರಣೆ ಮುಂದುವರಿಸಲು ವಿಚಾ ರಣಾ ನ್ಯಾಯಾಲಯಕ್ಕೆ ಅನುಮತಿ ನೀಡಿದರೆ ಅದು ಕಾನೂನಿನ ದುರ್ಬಳಕೆ ಯಾಗಲಿದೆ’ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.

ಪ್ರಕರಣವೇನು?:ರಾಜ್ಯ ಕಾರಾಗೃಹಗಳಇಲಾಖೆ ಡಿಜಿಐ ಆಗಿದ್ದ ಡಿ.ರೂಪಾ2017ರ ಜುಲೈ 12ರಂದು ಸರ್ಕಾರಕ್ಕೆ ವರದಿಯೊಂದನ್ನು ಸಲ್ಲಿಸಿ, ಅಂದು ಕಾರಾಗೃಹ ಇಲಾಖೆ ಡಿಜಿಪಿಯಾಗಿದ್ದ ಎಚ್.ಎನ್. ಸತ್ಯನಾರಾಯಣ ರಾವ್ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಭ್ರಷ್ಟಾಚಾರ ಪ್ರಕರಣಗಳಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿದ್ದ ಎಐಎಡಿಎಂಕೆ ನಾಯಕಿ ಶಶಿಕಲಾ ಅವರಿಗೆ ವಿಶೇಷ ಸೌಲಭ್ಯ ಕಲ್ಪಿಸಲು ಸತ್ಯನಾರಾಯಣ ರಾವ್ ₹2 ಕೋಟಿ ಲಂಚ ಪಡೆ ದಿದ್ದಾರೆ‘ ಎಂದು ರೂಪಾ ನೀಡಿದ್ದ ವರದಿಯಲ್ಲಿ ಆರೋಪಿಸಲಾಗಿತ್ತು.

ಸತ್ಯನಾರಾಯಣ ರಾವ್ 2017ರ ಜುಲೈ 31ರಂದು ಸೇವೆಯಿಂದ ನಿವೃತ್ತರಾಗಿದ್ದರು. ಬಳಿಕ ‘ರೂಪಾ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ. ಇದರಿಂದ ನನ್ನ ಘನತೆಗೆ ಧಕ್ಕೆ ಉಂಟಾಗಿದೆ’ ಎಂದು ಆರೋಪಿಸಿ ನಗರದ 9ನೇ ಎಸಿಎಂಎಂ ನ್ಯಾಯಾಲಯದಲ್ಲಿ ₹20 ಕೋಟಿ ಮೊತ್ತಕ್ಕೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT