ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎರಡನೇ ಹಂತದ ‘ಜನತಾ ಸಂಗಮ'ಕ್ಕೆ ಎಚ್‌.ಡಿ. ದೇವೇಗೌಡ ಚಾಲನೆ

Last Updated 8 ನವೆಂಬರ್ 2021, 8:13 IST
ಅಕ್ಷರ ಗಾತ್ರ

ಬೆಂಗಳೂರು: ಮುಂದಿನ ಚುನಾವಣೆಗೆ ಸಿದ್ಧತೆ ಸೇರಿದಂತೆ ಪಕ್ಷವನ್ನು ತಾಲ್ಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಸಂಘಟಿಸುವ ಸಲುವಾಗಿ ಒಂದು ವಾರ ನಡೆಯಲಿರುವ ಪಕ್ಷದ ‘ಜನತಾ ಪರ್ವ 1.O’ ಎರಡನೇ ಹಂತದ ‘ಮಿಷನ್ 123– ಜನತಾ ಸಂಗಮ' ಕಾರ್ಯಗಾರಕ್ಕೆ ಜೆಡಿಎಸ್‌ ವರಿಷ್ಠ ಎಚ್.ಡಿ. ದೇವೇಗೌಡ ಅವರು ಸೋಮವಾರ ಚಾಲನೆ ನೀಡಿದರು.

ಪಕ್ಷದ ಕಚೇರಿ ಜೆ.ಪಿ. ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪತ್ರಕರ್ತ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಪಿ. ರಾಮಯ್ಯ ಅವರು ಜೆಡಿಎಸ್‌ನ ಮಾಸಪತ್ರಿಕೆ 'ಜನತಾ ಪತ್ರಿಕೆ' ಬಿಡುಗಡೆ ಮಾಡಿದರು. ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ರಾಜ್ಯ ಘಟಕದ ಅಧ್ಯಕ್ಷ ಎಚ್‌.ಕೆ. ಕುಮಾರಸ್ವಾಮಿ ಇದ್ದರು

ಕಾರ್ಯಾಗಾರದಲ್ಲಿ ಪ್ರತಿ ದಿನ ಎರಡು ಜಿಲ್ಲೆಗಳ ನಾಯಕರ ಜೊತೆ ಸಭೆ ನಡೆಯಲಿದೆ. ಈ ಸಭೆಯಲ್ಲಿ ಮುಂದಿನ ಚುನಾವಣಾ ಸಿದ್ಧತೆ ಸಂಬಂಧ ವಿಚಾರ ವಿನಿಮಯು ನಡೆಯಲಿದೆ. ಮೊದಲ ದಿನ ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಪ್ರತಿನಿಧಿಗಳ ಜತೆ ಸಮಾಲೋಚನೆ ನಡೆಯಲಿದ್ದು, ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಅಭ್ಯರ್ಥಿಗಳು ಹಾಗೂ ಮುಖಂಡರು, ಕಾರ್ಯಕರ್ತರ ನಡುವೆ ಸಮನ್ವಯತೆ ಸಾಧಿಸುವ ಉದ್ದೇಶದಿಂದ ಈ ಕಾರ್ಯಗಾರ ನಡೆಯಲಿದೆ.

9ರಂದು ಕೊಪ್ಪಳ, ರಾಯಚೂರು, ಬಳ್ಳಾರಿ, ವಿಜಯನಗರ, ಬೀದರ್‌, ಯಾದಗಿರಿ, ಕಲಬುರಗಿ; 10ರಂದು ಧಾರವಾಡ, ಹುಬ್ಬಳ್ಳಿ-ಧಾರವಾಡ ನಗರ, ಉತ್ತರ ಕನ್ನಡ, ಗದಗ, ಹಾವೇರಿ, ದಾವಣಗೆರೆ; 11ರಂದು ವಿಜಯಪುರ, ಬಾಗಲಕೋಟೆ, ದಕ್ಷಿಣ ಕನ್ನಡ, ಉಡುಪಿ, ಕೊಡಗು; 12ರಂದು ಚಾಮರಾಜನಗರ, ಮಂಡ್ಯ, ಮೈಸೂರು, ಮೈಸೂರು ನಗರ; 13ರಂದು ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ತುಮಕೂರು; 15ರಂದು ಬೆಳಗಾವಿ, ಚಿಕ್ಕೋಡಿ, ಹಾಸನಕ್ಕೆ ಸಂಬಂಧಪಟ್ಟ ಸಭೆಗಳು ನಡೆಯಲಿವೆ.

‘ಜನತಾ ಸಂಗಮ‘ದಲ್ಲಿ ಮುಖಂಡರಾದ ಬಂಡೆಪ್ಪ ಕಾಶೆಂಪುರ, ಲಿಂಗೇಶ್, ಅಶ್ವಿನ್ ಕುಮಾರ್, ವೀರಭದ್ರಯ್ಯ, ಮಂಜುನಾಥ್, ತಿಪ್ಪೇಸ್ವಾಮಿ, ರಮೇಶ್ ಗೌಡ ಭಾಗವಹಿಸಿದ್ದಾರೆ. ಆದರೆ, ಶಾಸಕರು ಸಿ.ಎಸ್‌. ಪುಟ್ಟರಾಜು, ಸಾ.ರಾ. ಮಹೇಶ್, ಗೌರಿ ಶಂಕರ್, ಶಿವಲಿಂಗೇಗೌಡ, ಎಚ್‌.ಡಿ. ರೇವಣ್ಣ, ಅನ್ನದಾನಿ, ವಿಧಾನ ಪರಿಷತ್ ಸದಸ್ಯರಾದ ಮರಿತಿಬ್ಬೇಗೌಡ, ಶ್ರೀಕಂಠೇಗೌಡ, ಬೆಮಲ್ ಕಾಂತರಾಜು, ಗೋವಿಂದರಾಜು ಸೇರಿದಂತೆ ಹಲವರು ಗೈರಾಗಿದ್ದಾರೆ. ಸಂಸದ ಪ್ರಜ್ವಲ್ ರೇವಣ್ಣ ಮತ್ತು ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಕೂಡ ಬಂದಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT