ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಲ್ಪಸಂಖ್ಯಾತ ಸಮುದಾಯ ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ: ಎಚ್‌ಡಿಡಿ

Last Updated 17 ಆಗಸ್ಟ್ 2020, 19:09 IST
ಅಕ್ಷರ ಗಾತ್ರ

ಬೆಂಗಳೂರು:‘ನಮ್ಮದು ಜಾತ್ಯತೀತ ಪಕ್ಷ. ಅಲ್ಪಸಂಖ್ಯಾತ ಸಮುದಾಯವನ್ನು ಬಿಟ್ಟು ಕೊಡುವ ಪ್ರಶ್ನೆಯೇ ಇಲ್ಲ. ನಗರದಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿ 300ಕ್ಕೂ ಹೆಚ್ಚು ಮಂದಿ ಅಲ್ಪಸಂಖ್ಯಾತರನ್ನು ಬಂಧಿಸಲಾಗಿದೆ. ಆದರೆ, ನಿರಪರಾಧಿಗಳಿಗೆ ಕಿರುಕುಳ ಕೊಡಬಾರದು. ಈ ಬಗ್ಗೆ ಸರ್ಕಾರ ಗಮನಹರಿಸಬೇಕು’ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಹೇಳಿದರು.

ಸೋಮವಾರ ವಿಡಿಯೊ ಸಂವಾ ದದ ವೇಳೆ ಮಾತನಾಡಿದ ಅವರು, ‘ಗಲಭೆ ವಿಷಯದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅನುಕೂಲಕ್ಕೆ ತಕ್ಕಂತೆ ರಾಜ ಕೀಯ ಮಾಡುತ್ತಿದ್ದು, ರಾಜ್ಯಸಭೆಯಲ್ಲಿ ಹೋರಾಟ ಮಾಡುತ್ತೇನೆ’ ಎಂದರು.

ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ, ‘ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್‌ನವರು ಹಾನಿ ಮಾಡಿಕೊಂಡಿದ್ದಾರೆ. ಹಾಗಾಗಿ ಆ ಪಕ್ಷದ ನಾಯಕರು ಗಲಭೆ ಬಗ್ಗೆ ಮಾತನಾಡುವ ಧೈರ್ಯ ತೋರುತ್ತಿಲ್ಲ’ ಎಂದರು. ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಕೆ ಕುಮಾರಸ್ವಾಮಿ, ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಸಂಸದ ಪ್ರಜ್ವಲ್ ರೇವಣ್ಣ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT