ಕೋಲಾರ ಶಾಸಕ ಕೆ. ಶ್ರೀನಿವಾಸಗೌಡ ವಿರುದ್ಧ ಕ್ರಮ: ಎಚ್.ಡಿ.ದೇವೇಗೌಡ

ಬೆಂಗಳೂರು: ಕಾಂಗ್ರೆಸ್ ಮುಖಂಡರ ಜತೆ ಸೇರಿಕೊಂಡು ಜೆಡಿಎಸ್ ಪಕ್ಷಕ್ಕೆ ಹಾನಿಯಾಗುವಂತೆ ಮಾತನಾಡುತ್ತಿರುವ ಕೋಲಾರ ಶಾಸಕ ಕೆ.ಶ್ರೀನಿವಾಸ ಗೌಡ ವಿರುದ್ಧ ಕ್ರಮ ಜರುಗಿಸುವಂತೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಸೂಚನೆ ನೀಡಲಾಗಿದೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಹೇಳಿದರು.
ಪಕ್ಷದ ಕಚೇರಿಯಲ್ಲಿ ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, 'ಕೋಲಾರ ಶಾಸಕರ ವಿಚಾರದಲ್ಲಿ ಇನ್ನು ಸಹಿಸಲು ಆಗುವುದಿಲ್ಲ. ನೇರವಾಗಿ ಪಕ್ಷಕ್ಕೆ ಹಾನಿಯಾಗುವ ರೀತಿಯಲ್ಲಿ ಅವರು ಮಾತನಾಡುತ್ತಿದ್ದಾರೆ. ಸೂಕ್ತ ಕ್ರಮ ಜರುಗಿಸುವಂತೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಿಗೆ ಸೂಚಿಸಿದ್ದೇನೆ' ಎಂದರು.
ಶಾಸಕ ಜಿ.ಟಿ. ದೇವೇಗೌಡ ಅವರು ಕೂಡ ಕಾಂಗ್ರೆಸ್ ನಾಯಕರ ಜತೆ ಮಾತುಕತೆ ನಡೆಸಿದ್ದಾರೆ. ತಮಗೆ ಹಾಗೂ ಮಗನಿಗೆ ಟಿಕೆಟ್ ನೀಡುವಂತೆ ಸಿದ್ದರಾಮಯ್ಯ ಬಳಿ ಕೇಳಿರುವುದಾಗಿ ಹೇಳಿಕೊಂಡಿದ್ದಾರೆ. ಆದರೆ, ಅವರು ಪಕ್ಷಕ್ಕೆ ಹಾನಿಯಾಗುವ ರೀತಿಯಲ್ಲಿ ಎಲ್ಲಿಯೂ ಮಾತನಾಡಿಲ್ಲ. ಹೀಗಾಗಿ ಅವರ ವಿರುದ್ಧ ಕ್ರಮ ಕೈಗೊಳ್ಳುವ ಪ್ರಸ್ತಾವ ಸದ್ಯಕ್ಕೆ ಇಲ್ಲ ಎಂದು ಹೇಳಿದರು.
ಇದನ್ನೂ ಓದಿ... ನೆರೆ ಪರಿಹಾರ ಎಂಬುದು ರೈತರ ಪಾಲಿಗೆ ಕೈಗೆ ಸಿಗದ ಮಾಯಾಜಿಂಕೆಯಾಗಿದೆ: ಕಾಂಗ್ರೆಸ್
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.