ಸೋಮವಾರ, ಏಪ್ರಿಲ್ 12, 2021
29 °C

ಕೋವಿಡ್‌: ಗುಣಮುಖರಾದ ಎಚ್‌.ಡಿ. ದೇವೇಗೌಡ ದಂಪತಿ ಆಸ್ಪತ್ರೆಯಿಂದ ಮನೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌ ಸೋಂಕಿತರಾಗಿದ್ದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರೂ ಆಗಿರುವ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಮತ್ತು ಅವರ ಪತ್ನಿ ಚೆನ್ನಮ್ಮ ಗುಣಮುಖರಾಗಿದ್ದು, ಸೋಮವಾರ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.

ಜ್ವರದಿಂದ ಬಳಲುತ್ತಿದ್ದ ಚೆನ್ನಮ್ಮ ಅವರಿಗೆ ಮೊದಲು ಕೋವಿಡ್‌ ದೃಢಪಟ್ಟಿತ್ತು. ಮಾರ್ಚ್‌ 30ರಂದು ಅವರನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ದೇವೇಗೌಡರಿಗೂ ಕೋವಿಡ್‌ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಮಾ.31ರಂದು ಅವರನ್ನೂ ಅದೇ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಇಬ್ಬರೂ ಸೋಂಕಿನಿಂದ ಗುಣಮುಖರಾಗಿರುವುದು ಸೋಮವಾರ ನಡೆಸಿದ ಪರೀಕ್ಷೆಯಲ್ಲಿ ಖಚಿತವಾಗಿತ್ತು. ಬಳಿಕ ಅವರನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ದೇವೇಗೌಡ ದಂಪತಿ ಆಸ್ಪತ್ರೆಯಿಂದ ನಿರ್ಗಮಿಸುವಾಗ ಮಣಿಪಾಲ ಆಸ್ಪತ್ರೆಗಳ ಸಮೂಹದ ಅಧ್ಯಕ್ಷ ಡಾ.ಸುದರ್ಶನ್ ಬಲ್ಲಾಳ್‌ ಮತ್ತು ಶ್ವಾಸಕೋಶ, ಉಸಿರಾಟ ಸಂಬಂಧಿ ತಜ್ಞ ಡಾ. ಸತ್ಯನಾರಾಯಣ್‌ ಮೈಸೂರು ಹಾಜರಿದ್ದು, ಹೂಗುಚ್ಛ ನೀಡಿ ಬೀಳ್ಕೊಟ್ಟರು.

ಮನೆಗೆ ಮರಳಿದ ಬಳಿಕ ತಮಗಾಗಿ ಕಳಕಳಿ ತೋರಿ, ಗುಣಮುಖರಾಗುವಂತೆ ಹಾರೈಸಿದವರಿಗೆ ಪತ್ರದ ಮೂಲಕ ಕೃತಜ್ಞತೆ ಸಲ್ಲಿಸಿರುವ ದೇವೇಗೌಡ, ಶೀಘ್ರದಲ್ಲಿ ಕ್ರಿಯಾಶೀಲ ಸಾರ್ವಜನಿಕ ಜೀವನಕ್ಕೆ ಮರಳುವುದಾಗಿ ತಿಳಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು