ಬುಧವಾರ, ಅಕ್ಟೋಬರ್ 5, 2022
27 °C

ಬಿಹಾರ ಬೆಳವಣಿಗೆ ಕಂಡು ಜನತಾ ಪರಿವಾರ ಒಟ್ಟಿಗಿದ್ದ ಕಾಲ ಮೆಲುಕು ಹಾಕಿದ ದೇವೇಗೌಡ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಜನತಾ ಪರಿವಾರ ಒಟ್ಟುಗೂಡಿಸಲು ಯುವ ಪೀಳಿಗೆ ನಿರ್ಧರಿಸಿದರೆ, ಅದು ಈ ರಾಷ್ಟ್ರಕ್ಕೆ ಉತ್ತಮ ಪರ್ಯಾಯ ಶಕ್ತಿಯಾಗಲಿದೆ ಎಂದು ಜೆಡಿಎಸ್‌ ವರಿಷ್ಠ ಎಚ್‌.ಡಿ ದೇವೇಗೌಡ ಅವರು ಅಭಿಪ್ರಾಯಪಟ್ಟಿದ್ದಾರೆ. 

ಬಿಹಾರದ ರಾಜಕೀಯ ಸ್ಥಿತ್ಯಂತರಗಳ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಮಂಗಳವಾರ ಸಾಮಾಜಿಕ ಮಾಧ್ಯಮ ಟ್ವಿಟರ್‌ನಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 

‘ಬಿಹಾರದ ಬೆಳವಣಿಗೆಗಳನ್ನು ಗಮನಿಸುತ್ತಿದ್ದೇನೆ. ಜನತಾದಳ ಪರಿವಾರ ಒಂದೇ ಸೂರಿನಡಿ ಇದ್ದ ದಿನಗಳನ್ನು ನಾನು  ಚಿಂತಿಸುವಂತೆ ಮಾಡಿತು. ಜನತಾದಳ ದೇಶಕ್ಕೆ ಮೂವರು ಪ್ರಧಾನ ಮಂತ್ರಿಗಳನ್ನು ನೀಡಿದೆ. ನಾನು ನನ್ನ ಇಳಿವಯಸ್ಸಿನಲ್ಲಿದ್ದೇನೆ. ಆದರೆ, ಯುವ ಪೀಳಿಗೆ ನಿರ್ಧರಿಸಿದರೆ ಈ ಮಹಾನ್ ರಾಷ್ಟ್ರಕ್ಕೆ ಉತ್ತಮ ಪರ್ಯಾಯ ಶಕ್ತಿಯೊಂದು ಸಿಗಲಿದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. 

ಬಿಹಾರದ ಮುಖ್ಯಮಂತ್ರಿ ಸ್ಥಾನಕ್ಕೆ ಜೆಡಿಯು ವರಿಷ್ಠ ನಿತೀಶ್‌ ಕುಮಾರ್‌ ಅವರು ಮಂಗಳವಾರ ರಾಜೀನಾಮೆ ನೀಡಿದರು. ಜೆಡಿಯು, ಆರ್‌ಜೆಡಿ, ಕಾಂಗ್ರೆಸ್‌ ಪಕ್ಷಗಳು ಅಲ್ಲಿ ಹೊಸ ಸರ್ಕಾರ ರಚಿಸುವ ಸಾಧ್ಯತೆಗಳಿದ್ದು, ನಿತೀಶ್‌ ಅವರೇ ಮುಖ್ಯಮಂತ್ರಿಯಾಗಿ ಮುಂದುವರಿಯಲಿದ್ದಾರೆ ಎಂದು ಹೇಳಲಾಗಿದೆ. 

ಇವುಗಳನ್ನೂ ಓದಿ

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು