ಕನ್ನಡ ಸಾಹಿತ್ಯ ಪರಿಷತ್ತು ಸದಸ್ಯತ್ವ ಪಡೆದ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಒಂದು ಕೋಟಿ ಸದಸ್ಯತ್ವ ಅಭಿಯಾನ ಹಮ್ಮಿಕೊಂಡಿದೆ. ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು ಪರಿಷತ್ತಿನ ಆಜೀವ ಸದಸ್ಯತ್ವ ಸ್ವೀಕರಿಸುವ ಮೂಲಕ ಈ ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದಾರೆ.
ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಅವರು ಸದಸ್ಯತ್ವ ಪ್ರತಿಯನ್ನು ಎಚ್.ಡಿ. ದೇವೇಗೌಡ ಅವರಿಗೆ ಹಸ್ತಾಂತರಿಸಿದರು.
‘ಕನ್ನಡ ಸಾಹಿತ್ಯ ಪರಿಷತ್ತಿನ ನಡೆ- ಕನ್ನಡಿಗರ ಕಡೆ’ ಎಂಬ ಆಶಯದೊಂದಿಗೆ ಒಂದು ಕೋಟಿ ಸದಸ್ಯತ್ವ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ಪರಿಷತ್ತಿನ ಗೌರವ ಕಾರ್ಯದರ್ಶಿ ನೇ.ಭ. ರಾಮಲಿಂಗಶೆಟ್ಟಿ ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.