ಭಾನುವಾರ, ಜುಲೈ 3, 2022
26 °C
ಮರಳಿ ಜೆಡಿಎಸ್‌ಗೆ ಕರೆತರಲು ಪ್ರಯತ್ನ ಆರಂಭ

ಸಿ.ಎಂ. ಇಬ್ರಾಹಿಂ ಭೇಟಿಯಾದ ಎಚ್‌ಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ವಿಧಾನ ಪರಿಷತ್‌ನ ಕಾಂಗ್ರೆಸ್ ಸದಸ್ಯ ಸಿ.ಎಂ. ಇಬ್ರಾಹಿಂ ಅವರ ಮನೆಗೆ ಸೋಮವಾರ ದಿಢೀರ್‌ ಭೇಟಿ ನೀಡಿರುವ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ.

ಜನತಾ ದಳದಲ್ಲಿ ಸಕ್ರಿಯರಾಗಿದ್ದ ಇಬ್ರಾಹಿಂ, ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನಿಕಟವರ್ತಿಗಳಲ್ಲಿ ಪ್ರಮುಖರು. ಸಿದ್ದರಾಮಯ್ಯ ಅವರೊಂದಿಗೆ ಕಾಂಗ್ರೆಸ್‌ ಸೇರಿದ್ದರು.

ಇಬ್ರಾಹಿಂ ಅವರು ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರಿಂದ ಕೆಲವು ದಿನಗಳಿಂದ ಅಂತರ ಕಾಯ್ದುಕೊಂಡಿದ್ದಾರೆ. ಫ್ರೇಜರ್‌ ಟೌನ್‌ನಲ್ಲಿರುವ ಅವರ ಮನೆಗೆ ಸೋಮವಾರ ಬೆಳಿಗ್ಗೆ ಭೇಟಿನೀಡಿದ ಕುಮಾರಸ್ವಾಮಿ, ಒಂದು ಗಂಟೆಗೂ ಹೆಚ್ಚು ಕಾಲ ಸಮಾಲೋಚನೆ ನಡೆಸಿದ್ದಾರೆ.

ಕಾಂಗ್ರೆಸ್‌ ನಾಯಕರೊಂದಿಗೆ ಮುನಿಸಿಕೊಂಡಿರುವ ಇಬ್ರಾಹಿಂ ಅವರನ್ನು ಮತ್ತೆ ಜೆಡಿಎಸ್‌ಗೆ ಕರೆತರಲು ಕುಮಾರಸ್ವಾಮಿ ಪ್ರಯತ್ನ ಆರಂಭಿಸಿದ್ದಾರೆ. ಪಕ್ಷಕ್ಕೆ ಮರಳಿದರೆ ಜೆಡಿಎಸ್‌ ರಾಜ್ಯ ಘಟಕದ ಅಧ್ಯಕ್ಷರ ಹುದ್ದೆ ನೀಡುವುದಾಗಿ ಇಬ್ರಾಹಿಂ ಅವರಿಗೆ ಆಹ್ವಾನ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು