ಭಾನುವಾರ, ಅಕ್ಟೋಬರ್ 24, 2021
23 °C

ಭದ್ರಾವತಿ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯನ್ನು ಘೋಷಿಸಿದ ಎಚ್‌ಡಿಕೆ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಭದ್ರಾವತಿ ವಿಧಾನಸಭಾ ಕ್ಷೇತ್ರಕ್ಕೆ ಜೆಡಿಎಸ್‌ ಅಭ್ಯರ್ಥಿ ಯಾರೆಂಬುದನ್ನು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರಸ್ವಾಮಿ ಮಂಗಳವಾರ ಘೋಷಿಸಿದರು.

ಭದ್ರಾವತಿ ಸಮೀಪದ ಗೋಣಿಬೀಡಿನಲ್ಲಿ ಮಂಗಳವಾರ ಮಾಜಿ ಶಾಸಕ ಎಂ.ಜೆ. ಅಪ್ಪಾಜಿ ಅವರ ಪುತ್ಥಳಿ ಅನಾವರಣ ಕಾರ್ಯಕ್ರಮ ನಡೆಯಿತು. 

ಈ ವೇಳೆ ಮಾತನಾಡಿದ ಅವರು, ‘ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಶಾಸಕ ಅಪ್ಪಾಜಿ ಗೌಡ ಅವರ ಪತ್ನಿ ಶಾರದಾ ಅಪ್ಪಾಜಿ ಅವರನ್ನು ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲಾಗುವುದು. ಈಗಾಗಲೇ ಭದ್ರಾವತಿ ಕ್ಷೇತ್ರದ ಜನರು ನಿರ್ಧಾರ ಮಾಡಿದ್ದಾರೆ. ಜನರ ಭಾವನೆಗಳಿಗೆ ಪಕ್ಷ ಮನ್ನಣೆ ನೀಡುತ್ತದೆ,’ ಎಂದು ಹೇಳಿದರು. 

‘27ರಂದು ಬೆಂಗಳೂರಿನಲ್ಲಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿದೆ. 140 ವಿಧಾನಸಭಾ ಕ್ಷೇತ್ರಗಳ ಆಕಾಂಕ್ಷಿಗಳು ಭಾಗವಹಿಸುವರು. ಅಲ್ಲಿ ಎಲ್ಲಾ ವಿಚಾರ ಚರ್ಚೆ ಮಾಡುತ್ತೇವೆ’ ಎಂದು ವಿವರ ನೀಡಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು