ಶನಿವಾರ, ಮಾರ್ಚ್ 25, 2023
28 °C

ಬಿಎಸ್‌ವೈ–ಎಚ್‌ಡಿಕೆ ಒಳ ಒಪ್ಪಂದ: ಯೋಗೇಶ್ವರ್‌ ಆರೋಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮದ್ದೂರು (ಮಂಡ್ಯ): ‘ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹಾಗೂ ಜೆಡಿಎಸ್‌ ಶಾಸಕಾಂಗ ‍ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಒಳ ಒಪ್ಪಂದ ಮಾಡಿಕೊಂಡಿದ್ದಾರೆ. ಆದ್ದರಿಂದ ಕೆಲ ಜಿಲ್ಲೆಗಳಲ್ಲಿ ಬಿಜೆಪಿ ಸಂಘಟನೆ ಮಾಡಲು ಸಮಸ್ಯೆಯಾಗುತ್ತಿದೆ’ ಎಂದು ಸಚಿವ ಸಿ.ಪಿ.ಯೋಗೇಶ್ವರ್‌ ಮಂಗಳವಾರ ಇಲ್ಲಿ ಆರೋಪಿಸಿದರು.

ಬಿಜೆಪಿ ತಾಲ್ಲೂಕು ಘಟಕದ ಸಭೆಯಲ್ಲಿ ಅವರು, ‘ರಾಮನಗರ, ಮಂಡ್ಯ, ಮೈಸೂರು, ಹಾಸನ ಜಿಲ್ಲೆಗಳಲ್ಲಿ ಯಡಿಯೂರಪ್ಪ ಅವರು ಕುಮಾರಸ್ವಾಮಿ ಜೊತೆ ಹೊಂದಾಣಿಕೆ ರಾಜಕಾರಣ ಮಾಡುತ್ತಿದ್ದು, ಪಕ್ಷ ಸಂಘಟನೆ ಸಾಧ್ಯವಾಗುತ್ತಿಲ್ಲ. ಇದರಿಂದ ನನಗೂ ಸೇರಿದಂತೆ ಅನೇಕರಿಗೆ ಮುಜುಗರವಾಗುತ್ತಿದೆ. ಮುಂದೆಯಾದರೂ ಪಕ್ಷದ ಮುಖಂಡರು ಹಾಗೂ ಹೈಕಮಾಂಡ್ ಈ ಬಗ್ಗೆ ಕ್ರಮವಹಿಸಬಹುದೆಂಬ ವಿಶ್ವಾಸವಿದೆ’ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು