ವಿರೋಧಕ್ಕೆ ಮಾತ್ರ ವಿರೋಧ ಪಕ್ಷವಲ್ಲ. ತನ್ನ ಜವಾಬ್ದಾರಿಗಳನ್ನು ಅದು ರಚನಾತ್ಮಕವಾಗಿ ನಿರ್ವಹಿಸಬೇಕು. ಭೂಸುಧಾರಣಾ ತಿದ್ದುಪಡಿ ಕಾಯ್ದೆ ವಿಚಾರದಲ್ಲಿ ಜೆಡಿಎಸ್ ರೈತರ ಹಿತ ಕಾಯುತ್ತ ಆ ಕೆಲಸ ಮಾಡಿದೆ. ಕಾಯ್ದೆ ವಿಚಾರವಾಗಿ ನ್ಯಾಯ ಕಾಂಗ್ರೆಸ್ ಕಡೆಯೂ ಇರಲಿಲ್ಲ, ಬಿಜೆಪಿ ಕೆಡೆಯೂ ಇರಲಿಲ್ಲ. ಕಾಯ್ದೆ ಸಮತೋಲನಗೊಳ್ಳುವಂತೆ ಜೆಡಿಎಸ್ ಮಾಡಿದೆ. 1/10
ಭೂಸುಧಾರಣ ಕಾಯ್ದೆಯಲ್ಲಿ ನಿಜವಾದ ಸುಧಾರಣಾ ಕ್ರಮಗಳನ್ನು ಸಾಧಿಸಿದ್ದು ಜೆಡಿಎಸ್. ಆದರೂ ವಿಮರ್ಶೆ ಇಲ್ಲದೇ ಏಕಾಏಕಿ ಜೆಡಿಎಸ್ ಅನ್ನು ದೂರಲಾಗುತ್ತಿದೆ. ಜೆಡಿಎಸ್‌ನ ಮೇಲೆ ದಾಳಿ ಮಾಡುತ್ತಿರುವ ಕೆಲ ರೈತ ಮುಖಂಡರು ಒಂದು ಬಾರಿ ಪರಾಮರ್ಶೆ ಮಾಡಲಿ. ಜೆಡಿಎಸ್ ರೈತ ವಿರೋಧಿ ನಿಲುವು ತಳೆಯಲು ಎಂದಾದರೂ ಸಾಧ್ಯವೇ ಎಂದು ಪ್ರಶ್ನೆ ಮಾಡಿಕೊಳ್ಳಲಿ. 8/10
ನನ್ನನ್ನು ಟೀಕೆ ಮಾಡುತ್ತಿರುವ ಮನಸ್ಸುಗಳು ಒಮ್ಮೆ ನನ್ನ ರೈತ ಪರ ನಿಲುವುಗಳನ್ನು ಪರಾಮರ್ಶೆ ಮಾಡಲಿ, ಈ ವರೆಗಿನ ನನ್ನ ರೈತ ಪರ ಕಾರ್ಯಕ್ರಮಗಳನ್ನು ಅವಲೋಕಿಸಲಿ. ರೈತ ಕುಟುಂಬದಿಂದ ಬಂದ, ಮಣ್ಣಿನಿಂದ ಮೇಲೆದ್ದ ದೇವೇಗೌಡರ ಹಾದಿಯಲ್ಲಿ ನಡೆಯುತ್ತಿರುವ ನಾನು ಮತ್ತು ಜೆಡಿಎಸ್ ಈ ಮಣ್ಣಿಗೆ, ಮಣ್ಣಿನ ಮಕ್ಕಳಿಗೆ ಎಂದೂ ದ್ರೋಹ ಮಾಡುವುದಿಲ್ಲ. 10/10