ಶುಕ್ರವಾರ, 9 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವರ್ಗಾವಣೆಗೆ ಬೇಸರ: ರವೀಂದ್ರನಾಥ್‌ ರಾಜೀನಾಮೆ ಅಂಗೀಕರಿಸದಂತೆ ಎಚ್‌ಡಿಕೆ ಆಗ್ರಹ

Last Updated 11 ಮೇ 2022, 6:58 IST
ಅಕ್ಷರ ಗಾತ್ರ

ಬೆಂಗಳೂರು: ನಿಯಮ ಬಾಹಿರ ವರ್ಗಾವಣೆ ಮತ್ತು ಕರ್ತವ್ಯ ನಿರ್ವಹಣೆಗೆ ಅಡ್ಡಿಪಡಿಸಿರುವುದನ್ನು ವಿರೋಧಿಸಿ ರಾಜ್ಯ ಪೊಲೀಸ್ ತರಬೇತಿ ವಿಭಾಗದ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಡಾ.ಪಿ.ರವೀಂದ್ರನಾಥ್ ಸಲ್ಲಿಸಿರುವ ರಾಜೀನಾಮೆಯನ್ನು ಅಂಗೀಕರಿಸಬಾರದು ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ದಲಿತ ಸಮುದಾಯಕ್ಕೆ ಸೇರಿದ ದಕ್ಷ ಅಧಿಕಾರಿಯಾದ ರವೀಂದ್ರನಾಥ್‌ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದರು. ನಕಲಿ ಜಾತಿ ಪ್ರಮಾಣಪತ್ರ ನೀಡಿ ಸರ್ಕಾರಿ ಉದ್ಯೋಗ ಗಿಟ್ಟಿಸಿಕೊಂಡಿದ್ದ ದೊಡ್ಡ ತಿಮಿಂಗಲಗಳಿಗೆ ಬಲೆ ಹಾಕಿದ್ದರು. ಸರ್ಕಾರ ಹಾಗೂ ಸಮಾಜಕ್ಕೆ ವಂಚನೆ ಮಾಡಿದ್ದವರ ಜಾತಕ ಬಿಚ್ಚಿಡಲು ಪ್ರಯತ್ನ ಮಾಡುತ್ತಿದ್ದರು ಎಂದು ಹೇಳಿದ್ದಾರೆ.

ಗಣ್ಯ ವ್ಯಕ್ತಿ, ಪೊಲೀಸ್ ಇಲಾಖೆಯಲ್ಲಿ ಪ್ರಾಮಾಣಿಕತೆಯ ಪೋಸು ಕೊಟ್ಟು ನಕಲಿ ಜಾತಿ ಪತ್ರದ ಮೂಲಕ ಹುದ್ದೆ ಗಿಟ್ಟಿಸಿದ್ದಾರೆ ಎಂಬ ಆರೋಪಕ್ಕೆ ಗುರಿಯಾಗಿರುವ ನಿವೃತ್ತ ಅಧಿಕಾರಿಗೆ ನೋಟೀಸ್ ನೀಡಿದ ಹತ್ತೇ ದಿನದಲ್ಲಿ ನೋಟೀಸ್ ಕೊಟ್ಟಿರುವ ಅಧಿಕಾರಿಯನ್ನೇ ಎತ್ತಂಗಡಿ ಮಾಡಲಾಗಿದೆ. ಈ ಬೆಳವಣಿಗೆ ರಾಜ್ಯ ಸರ್ಕಾರ ಯಾರ ಬಾಲಂಗೋಚಿಯಾಗಿ ಕೆಲಸ ಮಾಡುತ್ತಿದೆ ಎಂಬುದಕ್ಕೆ ಸಾಕ್ಷಿ ಎಂದು ಟೀಕಿಸಿದ್ದಾರೆ.

ಆರೋಪಿ ಸ್ಥಾನದಲ್ಲಿರುವ ನಿವೃತ್ತ ಅಧಿಕಾರಿ ಕಾಂಗ್ರೆಸ್ ಸರ್ಕಾರದಲ್ಲಿ ಗೃಹ ಇಲಾಖೆಯ ಸಲಹೆಗಾರರಾಗಿದ್ದರು. ಐದು ವರ್ಷ ರಾಜ್ಯವನ್ನು ಆಳಿದ ಮುಖ್ಯಮಂತ್ರಿಗೆ ಆಪ್ತರೂ ಆಗಿದ್ದರು. ಅವರಿಗೆ ನೋಟೀಸ್ ನೀಡಿದಾಕ್ಷಣ ಡಾ.ರವೀಂದ್ರನಾಥ್ ಅವರನ್ನು ವರ್ಗಾವಣೆ ಮಾಡಲಾಗುತ್ತದೆ. ಇದು ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಇರುವ ಒಳ ಒಪ್ಪಂದವೇನು? ಒಬ್ಬ ದಲಿತ ಅಧಿಕಾರಿಯನ್ನು ಬಲಿ ಹಾಕಲು ಎರಡೂ ರಾಷ್ಟ್ರೀಯ ಪಕ್ಷಗಳು ನಡೆಸಿದ ಷಡ್ಯಂತ್ರ ಇದಾಗಿದೆ ಆರೋಪಿಸಿದ್ದಾರೆ.

ಆಪರೇಷನ್ ಕಮಲದ ಮೂಲಕ ಬಿಜೆಪಿ ಅಧಿಕಾರಕ್ಕೆ ಬರಲು ಸಹಕಾರ ನೀಡಿದ ನಾಯಕರ ಆಪ್ತರಾಗಿದ್ದ ನಿವೃತ್ತ ಅಧಿಕಾರಿ ವಿರುದ್ಧ ಕೇಳಿಬಂದಿರುವುದು ಗಂಭೀರ ಆರೋಪ. ಅಂಥ ವ್ಯಕ್ತಿಯನ್ನು ರಕ್ಷಣೆ ಮಾಡುವ ಅಗತ್ಯ ಸರ್ಕಾರಕ್ಕೆ ಏನಿದೆ? ಎಲ್ಲಿಂದ ಯಾರು, ಯಾರ ಮೇಲೆ ಒತ್ತಡ ಹೇರಿದ್ದಾರೆ? ಯಾರು ಯಾರ ಋಣ ಚುಕ್ತಾ ಮಾಡುತ್ತಿದ್ದಾರೆ? ಎನ್ನುವುದು ಜನರಿಗೆ ಗೊತ್ತಾಗಬೇಕಿದೆ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT