ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರಿಗೆ ನೌಕರನ ಪತ್ನಿ ಮಕ್ಕಳು ಆತ್ಮಹತ್ಯೆ: ಇದು ಕೊಲೆಗಡುಕ ಸರ್ಕಾರ ಎಂದ ಎಚ್‌ಡಿಕೆ

Last Updated 3 ಅಕ್ಟೋಬರ್ 2021, 5:28 IST
ಅಕ್ಷರ ಗಾತ್ರ

ಬೆಂಗಳೂರು: 'ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ. ಈ ಘಟನೆಯನ್ನು ಸರಕಾರ ತಡೆಯಬಹುದಿತ್ತು. ಮೊದಲೇ ಆ ಕುಟುಂಬಕ್ಕೆ ಪರಿಹಾರ, ಅನುಕಂಪದ ಉದ್ಯೋಗ ನೀಡಿದ್ದರೆ ಮೂರು ಅಮೂಲ್ಯ ಜೀವಗಳು ಉಳಿಯುತ್ತಿದ್ದವು. ಇದು 'ಕೊಲೆಗೆಡುಕ ಸರ್ಕಾರ'' ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, 'ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ ಸರ್ಕಾರ ಇಂಥವರ ನೆರವಿಗೆ ಧಾವಿಸಬೇಕಿತ್ತು. ಇಂತಹ ಪ್ರಕರಣಗಳ ಇತ್ಯರ್ಥಕ್ಕೆ ಮೊದಲ ಆದ್ಯತೆ ನೀಡಬೇಕಿತ್ತು. ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಹಾಗೂ ಅಧಿಕಾರಿಗಳ ಹೊಣೆಗೇಡಿತನ ಎದ್ದು ಕಾಣುತ್ತದೆ' ಎಂದು ದೂರಿದ್ದಾರೆ.

'ಕೂಡಲೇ ಪ್ರಕರಣಕ್ಕೆ ಸಂಬಂಧಪಟ್ಟ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಗಮನ ಹರಿಸಿ ಕೊರೊನ ಸೋಂಕಿನಿಂದಾಗಿ ಮೃತಪಟ್ಟ ಸಾರಿಗೆ ನೌಕರರ ಕುಟುಂಬಗಳಿಗೆ ನೆರವಾಗುವ ಮೂಲಕ ಮುಂದಿನ ಅನಾಹುತಗಳನ್ನು ತಪ್ಪಿಸಬೇಕು ಎಂದು ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯ ಮಾಡುತ್ತೇನೆ' ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT