ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಾವ ಉದ್ದೇಶಕ್ಕೆ ಕಾಯ್ದೆ ರದ್ದುಪಡಿಸಿದ್ದೀರಿ ಸ್ಪಷ್ಟಪಡಿಸಿ; ಎಚ್.ಡಿ.ಕುಮಾರಸ್ವಾಮಿ

Last Updated 19 ನವೆಂಬರ್ 2021, 8:37 IST
ಅಕ್ಷರ ಗಾತ್ರ

ರಾಮನಗರ: ಕೇಂದ್ರ ಸರ್ಕಾರವು ಯಾವ ಉದ್ದೇಶಕ್ಕಾಗಿ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದಿದೆ ಎಂಬುದರ ಬಗ್ಗೆ ಸ್ಪಷ್ಟನೆ ನೀಡಬೇಕು‌ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಆಗ್ರಹಿಸಿದರು.

ಬಿಡದಿಯಲ್ಲಿ ಶುಕ್ರವಾರ ಪತ್ರಕರ್ತರಿಗೆ ಅವರು ಪ್ರತಿಕ್ರಿಯೆ ನೀಡಿ, 'ರೈತರ ಪ್ರತಿಭಟನೆ ಮನವರಿಕೆ ಆಗಿ ಹಿಂಪಡೆಯಲಾಗಿದೆಯೋ‌, ಇಲ್ಲವೇ ರಾಜಕೀಯ ಉದ್ದೇಶಕ್ಕಾಗಿ ಈ‌ ನಿರ್ಧಾರಕ್ಕೆ ಬರಲಾಗಿದೆಯೋ ಎಂಬುದರ ಬಗ್ಗೆ ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು.

ಕೃಷಿ ಕಾಯ್ದೆಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ರೈತರು ಕಳೆದ ಒಂದು ವರ್ಷದಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.‌ ಇಷ್ಟು ದಿನ ಅವರ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸದ ಸರ್ಕಾರ ಈಗ ಏಕಾಏಕಿ ನಿರ್ಧಾರ ಹಿಂಪಡೆದಿರುವುದು ಹಲವು ಅನುಮಾನಗಳನ್ನು ಹುಟ್ಟುಹಾಕಿದೆ. ಪಂಚ ರಾಜ್ಯಗಳ‌ ಚುನಾವಣೆ ಹಿನ್ನೆಲೆಯಲ್ಲಿ ಈ ನಿರ್ಧಾರಕ್ಕೆ ಬಂದಿದೆಯಾ ಎಂಬ ಸಂಶಯ ಕಾಡುತ್ತಿದೆ ಎಂದರು.

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT