ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಗೊಳ್ಳಿ ರಾಯಣ್ಣ ನಮ್ಮ ನಾಡಿನ ಹೆಮ್ಮೆ, ರಾಜಿ ಪ್ರಶ್ನೆಯೇ ಇಲ್ಲ: ಕುಮಾರಸ್ವಾಮಿ

Last Updated 28 ಆಗಸ್ಟ್ 2020, 8:40 IST
ಅಕ್ಷರ ಗಾತ್ರ

ಬೆಂಗಳೂರು: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನಮ್ಮ ನಾಡಿನ ಹೆಮ್ಮೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಸದ್ಯ ಬೆಳಗಾವಿ ಜಿಲ್ಲೆಯಲ್ಲಿ ಸದ್ದು ಮಾಡುತ್ತಿರುವ ರಾಯಣ್ಣ ಪ್ರತಿಮೆ ವಿವಾದದಬಗ್ಗೆ ಕುಮಾರಸ್ವಾಮಿ ಸರಣಿ ಟ್ವೀಟ್‌ ಮಾಡಿದ್ದಾರೆ.

‘ನಮ್ಮ ನಾಡಿನ ನೆಲ-ಜಲ, ಭಾಷೆ ಮತ್ತು ಗಡಿ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಈ ನೆಲದ ಅಸ್ಮಿತೆಗೆ ಭಂಗ ತರುವವರನ್ನು ಹೆಡೆಮುರಿ ಕಟ್ಟುವುದು ಸ್ವಾಭಿಮಾನಿ ಕನ್ನಡಿಗರ ರಕ್ತದಲ್ಲೇ ಇದೆ. ಕನ್ನಡಿಗರೆಂದರೆ -ಸಾಧುಂಗೆ ಸಾಧು, ಮಾಧುರ್ಯಂಗೆ ಮಾಧುರ್ಯನ್, ಬಾದಿಪ್ಪ ಕಲಿಗೆ ಕಲಿಯುಗ ವಿಪರೀತನ್’ ಎಂದು ಹೇಳಿದ್ದಾರೆ.

‘ಸಂಗೊಳ್ಳಿ ರಾಯಣ್ಣ ನಮ್ಮ ನಾಡಿನ ಹೆಮ್ಮೆ. ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ. ನಾಡಿನ ವೀರಪುತ್ರ ಮತ್ತು ವನಿತೆಯರ ವಿರುದ್ಧ ನಮ್ಮ ನೆಲದಲ್ಲಿ ತಗಾದೆ ತೆಗೆದರೆ ತಕ್ಕಪಾಠ ಕಲಿಸಬೇಕಾಗುತ್ತದೆ’ ಎಂದಿದ್ದಾರೆ.

ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ. ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT