ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈತರ ಹೋರಾಟದ ವೇಳೆ ನಡೆದ ಹಿಂಸಾಚಾರ ದುರದೃಷ್ಟಕರ: ಕುಮಾರಸ್ವಾಮಿ

Last Updated 27 ಜನವರಿ 2021, 8:56 IST
ಅಕ್ಷರ ಗಾತ್ರ

ಬೆಂಗಳೂರು: ದೆಹಲಿಯಲ್ಲಿ ರೈತರ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ ದುರದೃಷ್ಟಕರ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ಸರಣಿ ಟ್ವೀಟ್‌ ಮಾಡಿರುವ ಅವರು, ‘ರೈತರ ಐತಿಹಾಸಿಕ ಹೋರಾಟದ ವೇಳೆ ದೆಹಲಿಯಲ್ಲಿ ನಡೆದ ಹಿಂಸಾಚಾರ ದುರದೃಷ್ಟಕರ. ರೈತರ ಸೋಗಿನಲ್ಲಿ ಸಮಾಜವಿರೋಧಿ ಶಕ್ತಿಗಳು ಇದರಲ್ಲಿ ಸೇರಿರಬಹುದು. ಈಗಾಗಲೇ ರೈತರೂ ಇದನ್ನು ಸ್ಪಷ್ಟಪಡಿಸಿದ್ದಾರೆ. ನ್ಯಾಯವಾದ ತಮ್ಮ ಉದ್ದೇಶವನ್ನು ಈಡೇರಿಸಿಕೊಳ್ಳಲು ಚಳಿ, ಗಾಳಿಯನ್ನೂ ಲೆಕ್ಕಿಸದೇ ಹೋರಾಡುತ್ತಿರುವ ರೈತರು ಇಂಥ ಕೃತ್ಯಕ್ಕೆ ಕೈಹಾಕಲಾರರು ಎಂಬುದೂ ಸತ್ಯ’ ಎಂದು ಹೇಳಿದ್ದಾರೆ.

‘ನಾಲ್ವರು ರೈತ ಮುಖಂಡರನ್ನು ಕೊಲ್ಲಲೆಂದು ಸಂಚು ನಡೆಸಿದ ಘಟನೆಗಳು ಈಗಾಗಲೇ ನಡೆದಿವೆ. ಅದಕ್ಕೆ ಸಂಬಂಧಪಟ್ಟಂತೆ ಒಬ್ಬ ವ್ಯಕ್ತಿಯನ್ನು ಹಿಡಿದು ರೈತರು ಪೊಲೀಸರಿಗೆ ಒಪ್ಪಿಸಿದ್ದಾರೆ. ಇನ್ನು ರೈತರ ಹೋರಾಟವನ್ನೇ ತಲೆಕೆಳಗೆ ಮಾಡಲು ಪ್ರಯತ್ನಗಳು ನಡೆಯದೇ ಇರುತ್ತವೆಯೇ? ಖಂಡಿತವಾಗಿಯೂ ಅನ್ಯ ಶಕ್ತಿಗಳು ಇದರ ಹಿಂದೆ ಇರುವ ಸಾಧ್ಯತೆಗಳಿವೆ' ಎಂದಿದ್ದಾರೆ.

‘ಇದು ಸೂಕ್ತ ಮಾತುಕತೆ ಮೂಲಕ ಬಗೆಹರಿಯುವ ಸಮಸ್ಯೆಯಾಗಿದೆ. ಸುಪ್ರೀಂ ಕೋರ್ಟ್‌ ಕೂಡ ಇದನ್ನೇ ಹೇಳಿದೆ. ಆದರೆ, ಹಾಗೆ ಆಗದೇ ಇರುವುದು ಬೇಸರದ ಸಂಗತಿ. ಈ ಘಟನೆಯನ್ನು ಆಡಳಿತದಲ್ಲಿರುವವರು ತಪ್ಪಿಸಬಹುದಿತ್ತು. ಘಟನೆ ಈಗ ಅಂತರರಾಷ್ಟ್ರೀಯ ಮಟ್ಟದಲ್ಲಿ ಭಾರತಕ್ಕೆ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ. ಈಗಲೂ ಕಾಲ ಮಿಂಚಿಲ್ಲ. ಸೌಹಾರ್ದ ಮಾರ್ಗ ಇದಕ್ಕೆ ಮದ್ದು’ ಎಂದು ಬರೆದುಕೊಂಡಿದ್ದಾರೆ.

ಹಿಂಸಾಚಾರದಲ್ಲಿ ಒಬ್ಬ ರೈತ ಮೃತಪಟ್ಟಿದ್ದು, 300ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT