ಹಿಂದೆ ರಾಜ್ಯದಲ್ಲಿ ಅಸ್ತಿತ್ವದಲ್ಲಿದ್ದ ‘ರಾಕ್ಷಸ ಸರ್ಕಾರ‘ವನ್ನು ಜನರ ಹಿತಕ್ಕಾಗಿ, ಅಭಿವೃದ್ಧಿಗಾಗಿ ಕೆಡವಿದ "ಸಮಾಜ ಸುಧಾರಕರು" ಇರುವ ಪಕ್ಷ ಬಿಜೆಪಿ. ಈಗ ನಾಯಕತ್ವವಿಲ್ಲದ ‘ಅಪಾಯಕಾರಿ ಸರ್ಕಾರ‘ದ ಬಗ್ಗೆ ಆ ಸಮಾಜ ಸುಧಾರಕರು ಸುಮ್ಮನಿರುವುದಾದರೂ ಹೇಗೆ. ಈ ಸಮಾಜ ಸುಧಾರಕರ ದಿವ್ಯ ಮೌನ ನನಗೆ ಆಶ್ಚರ್ಯ ತರಿಸುತ್ತಿದೆ. ಆತಂಕ ಉಂಟು ಮಾಡಿದೆ. 5/8
ನಾವಿಕನಿಲ್ಲದ ನಾವೆ, ಯಜಮಾನನಿಲ್ಲದ ಮನೆ, ನಾಯಕನಿಲ್ಲದ ಸರ್ಕಾರ ಇದು ಅಪಾಯಕಾರಿ. ಅದೂ ಸಾಂಕ್ರಾಮಿಕ ಕಾಲದಲ್ಲಿ ಮತ್ತಷ್ಟು ಅಪಾಯಕಾರಿ. ಈಗಿನ ಸರ್ಕಾರದ ನಾಯಕತ್ವ ಸರಿ ಇಲ್ಲ ಎಂದು ಬಿಜೆಪಿ ಶಾಸಕರೇ ಬಂಡೆದಿದ್ದಾರಂತೆ. ಇರುವವರನ್ನು ಬದಲಿಸಲು ನಾಯಕರ್ಯಾರೂ ಇಲ್ಲವಂತೆ. ಹಾಗಾಗಿ ಈ ಸರ್ಕಾರ ಜನರ ಪಾಲಿಗೆ ಅಪಾಯಕಾರಿಯಾಗಿದೆ ಎಂದರ್ಥ. 3/8
"ಸರ್ಕಾರದಲ್ಲಿ ನಾಯತ್ವ ಬಿಕ್ಕಟ್ಟು ಎದುರಾಗಿದೆಯಂತೆ, ನಾಯಕತ್ವ ಬದಲಿಸಲು ಸೂಕ್ತ ನಾಯಕನ ಹುಡುಕಾಟ ನಡೆದಿದೆಯಂತೆ, ಆದರೆ ಯಾವ ನಾಯಕರೂ ಸಿಗುತ್ತಿಲ್ಲವಂತೆ, ಬಿಜೆಪಿಯಲ್ಲಿ ಸಿಎಂ ಆಗಬಲ್ಲ ನಾಯಕನೇ ಇಲ್ಲವಂತೆ..." ಇವೆಲ್ಲವೂ ಬಿಜೆಪಿಯೊಳಗಿನ ಚರ್ಚೆಗಳ ಮಾಧ್ಯಮಗಳ ವರದಿ. ನಾಯಕತ್ವವೇ ಇಲ್ಲದ ಈ ಸರ್ಕಾರ ಇದ್ದೇನು ಉಪಯೋಗ. ವಿಸರ್ಜಿಸಿ ಮೊದಲು. 2/8