ಶನಿವಾರ, ಸೆಪ್ಟೆಂಬರ್ 25, 2021
29 °C

ವಿಜೇತಾ, ತೇಜಸ್ವಿನಿ ಅನಂತ್ ಕುಮಾರ್ ಪಕ್ಷಕ್ಕೆ ಬಂದರೆ ಸ್ವಾಗತ: ಎಚ್‌ಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಜೆಪಿ ಹಿರಿಯ ನಾಯಕರಾಗಿದ್ದ ದಿವಂಗತ ಅನಂತಕುಮಾರ್‌ ಅವರ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮತ್ತು ಅವರ ಪುತ್ರಿ ವಿಜೇತಾ ಪಕ್ಷಕ್ಕೆ ಬಂದರೆ ಸ್ವಾಗತ ಎಂದು ಜೆಡಿಎಸ್ ನಾಯಕ ಎಚ್‌.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

‘ರಾಜ್ಯದಲ್ಲಿ ಜೆಡಿಎಸ್‌ ಇನ್ನೂ ಬಲಿಷ್ಠವಾಗಿದೆ’ ಎಂದು ವಿಜೇತಾ ಟ್ವೀಟ್‌ ಮಾಡಿದ್ದಕ್ಕೆ ಪ್ರತಿಕ್ರಿಯಿಸಿದ ಅವರು, ‘ವಿಜೇತಾ ನನ್ನ ಸಹೋದರಿ ಸಮಾನರು. ಅವರಿಗೆ ಧನ್ಯವಾದಗಳು. ಈ ಮಾತು ‌ನಮ್ಮ ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಿಸಿದೆ’ ಎಂದಿದ್ದಾರೆ.

ಓದಿ: 

ಜತೆಗೆ, ವಿಜೇತಾ ಹಾಗೂ ಅವರ ತಾಯಿ ತೇಜಸ್ವಿನಿ ಅನಂತ್ ಕುಮಾರ್ ಅವರು ಪಕ್ಷಕ್ಕೆ ಬಂದರೆ ಸ್ವಾಗತ. ಬಿಜೆಪಿಯಂತೂ ಅವರನ್ನು ಗುರುತಿಸಿಲ್ಲ. ಮುಂದೆ ರಾಜಕಾರಣದಲ್ಲಿ ಅನೇಕ‌ ಬದಲಾವಣೆಗಳಾಗಲಿವೆ. ಅಲ್ಲಿಯವರೆಗೆ ತಾಳ್ಮೆಯಿಂದ ಕಾಯಬೇಕು ಎಂದು ಹೇಳಿದ್ದಾರೆ.

‘ಕರ್ನಾಟಕದ ರಾಜಕೀಯ ಏಕೆ ಕುತೂಹಲಕರವಾಗಿದೆ ಗೊತ್ತಾ? ಏಕೆಂದರೆ, ಜೆಡಿಎಸ್ ಇನ್ನೂ ಬಲಿಷ್ಠ ರಾಜಕೀಯ ಪಕ್ಷವಾಗಿ ಉಳಿದಿದೆ’ ಎಂದು ವಿಜೇತಾ ಟ್ವೀಟ್ ಮಾಡಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು