ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

24ರಂದು ಮಮತಾ–ಎಚ್‌ಡಿಕೆ ಚರ್ಚೆ

ವಿರೋಧ ಪಕ್ಷಗಳ ಒಗ್ಗೂಡಿಸಲು ಯತ್ನ
Last Updated 21 ಮಾರ್ಚ್ 2023, 19:43 IST
ಅಕ್ಷರ ಗಾತ್ರ

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಮುನ್ನ ಕಾಂಗ್ರೆಸ್‌ ರಹಿತ ವಿರೋಧ ಪಕ್ಷಗಳ ಕೂಟವನ್ನು ರಚಿಸುವ ಪ್ರಯತ್ನ ತೀವ್ರಗೊಳಿಸಿರುವ ತೃಣಮೂಲ ಕಾಂಗ್ರೆಸ್‌ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅವರೊಂದಿಗೆ ಶುಕ್ರವಾರ ಸಮಾಲೋಚನೆ ನಡೆಸಲಿದ್ದಾರೆ.

ಮಮತಾ ಅವರು ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್‌ ಯಾದವ್‌ ಅವರೊಂದಿಗೆ ಕಳೆದ ವಾರ ಚರ್ಚೆ ನಡೆಸಿದ್ದರು. ಮಮತಾ ಅವರು ಒಡಿಶಾ ಮುಖ್ಯಮಂತ್ರಿ ಹಾಗೂ ಜೆಡಿಯು ಮುಖ್ಯಸ್ಥ ನವೀನ್‌ ಪಟ್ನಾಯಕ್‌ ಅವರನ್ನು ಬುಧವಾರ ಭೇಟಿ ಮಾಡಲಿದ್ದಾರೆ. ಅದರ ಬೆನ್ನಲ್ಲೇ, ಕರ್ನಾಟಕದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರೊಂದಿಗಿನ ಭೇಟಿ ಮಹತ್ವ ಪಡೆದುಕೊಂಡಿದೆ. ಮಮತಾ ಅವರು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಮುಂದಿನ ವಾರ ಭೇಟಿ ಮಾಡುವ ಸಾಧ್ಯತೆ ಇದೆ.

‘ಕಾಂಗ್ರೆಸ್‌ನಿಂದ ಬಿಜೆಪಿ
ಯನ್ನು ಸೋಲಿಸಲು ಸಾಧ್ಯವಿಲ್ಲ. ಕಾಂಗ್ರೆಸ್‌ ಮುಖಂಡ ರಾಹುಲ್‌ ಗಾಂಧಿ ಅವರು ಪ್ರಧಾನಿ
ನರೇಂದ್ರ ಮೋದಿ ಅವರ ಟಿಆರ್‌ಪಿಯನ್ನು ಹೆಚ್ಚಿಸುತ್ತಿದ್ದಾರೆ’ ಎಂದು ಮಮತಾ ಇತ್ತೀಚೆಗೆ ಹೇಳಿಕೆ ನೀಡಿದ್ದರು. ಅಖಿಲೇಶ್‌ ಯಾದವ್‌ ಸಹ ಇದೇ ರೀತಿಯ ಹೇಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT