ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೆರೆ ಸಂತ್ರಸ್ತರ ನೆರವಿಗೆ ತಕ್ಷಣ ಧಾವಿಸಿ: ರಾಜ್ಯ ಸರ್ಕಾರಕ್ಕೆ ಎಚ್‌ಡಿಕೆ ಒತ್ತಾಯ

Last Updated 7 ಆಗಸ್ಟ್ 2020, 5:27 IST
ಅಕ್ಷರ ಗಾತ್ರ

ಬೆಂಗಳೂರು: 'ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸರ್ಕಾರ ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡಬೇಕು' ಎಂದು ಜೆಡಿಎಸ್ ನಾಯಕ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಟ್ವೀಟ್‌ ಮಾಡುವ ಮೂಲಕಆಗ್ರಹಿಸಿದ್ದಾರೆ.

'ಈ ಬಾರಿಯೂ ರಾಜ್ಯವು ಅತಿವೃಷ್ಟಿಯ ಸಂಕಷ್ಟಕ್ಕೆ ಸಿಲುಕಿದೆ. ರೈತರು ಕಂಗಾಲಾಗಿದ್ದಾರೆ. ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂಗಾರಿನ ಅಬ್ಬರ ಭೀತಿಯ ವಾತಾವರಣ ಸೃಷ್ಟಿಸಿದೆ. ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸುವ ಮೂಲಕ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕಿದೆ' ಎಂದು ಅವರು ಸಲಹೆ ಮಾಡಿದ್ದಾರೆ.

'ಅತಿವೃಷ್ಟಿ ಸಂತ್ರಸ್ತರಿಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕು. ಬೆಳೆ ಹಾನಿಗೊಳಗಾದ ರೈತರಿಗೆ ಹಾಗೂ ಮನೆ-ಮಠ ಕಳೆದುಕೊಂಡವರಿಗೆ, ಜೀವ ಹಾನಿಗೊಳಗಾದವರಿಗೆ ತಡಮಾಡದೆ ಸರ್ಕಾರ ಸಹಾಯಹಸ್ತ ಚಾಚಬೇಕು' ಎಂದು ಹೇಳಿದ್ದಾರೆ.

'ಸತತ ನೆರೆಯಿಂದ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ವಿಶೇಷ ಅರ್ಥಿಕ ನೆರವು ನೀಡಬೇಕು. ರಾಜ್ಯ ಸರ್ಕಾರ ಕೂಡ ಈ ಸಂಬಂಧ ಕೇಂದ್ರದ ಮೇಲೆ ಒತ್ತಡ ತರಬೇಕು.ಅತಿವೃಷ್ಟಿ ಸಂತ್ರಸ್ತರ ಪರಿಹಾರ ಕಾಮಗಾರಿಗಳಿಗೆ ಹಣಕಾಸಿನ ಕೊರತೆಯಾಗದಂತೆ ಸಕಾಲಿಕ ಎಚ್ಚರಿಕೆಯನ್ನು ಸರ್ಕಾರ ತೆಗೆದುಕೊಳ್ಳದಿದ್ದರೆ ಪರಿಸ್ಥಿತಿ ಬಿಗಡಾಯಿಸುತ್ತದೆ. ಒಂದು ಕಡೆ ಕೊರೋನಾ ಸೋಂಕಿನ ಭೀತಿ ಈಗ ನೆರೆಪೀಡಿತ ಪರಿಸ್ಥಿತಿ ಸರ್ಕಾರಕ್ಕೊಂದು ಅಗ್ನಿಪರೀಕ್ಷೆ. ಎಚ್ಚರ ತಪ್ಪಿದರೆ ಜನರ ಬದುಕು ಮೂರಾಬಟ್ಟೆಯಾಗುತ್ತದೆ' ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

'ಸಚಿವರು ಮತ್ತು ಅಧಿಕಾರಿಗಳು ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಅಲ್ಲಿಯೇ ಮೊಕ್ಕಾಂ ಮಾಡಿ ಪರಿಸ್ಥಿತಿಯ ಉಸ್ತುವಾರಿ ನೋಡಿಕೊಳ್ಳುವ ಮೂಲಕ ನೆರೆ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ' ಎಂದು ಕಿವಿಮಾತು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT