ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉರಿಗೌಡ–ನಂಜೇಗೌಡ ವಿವಾದ: ಒಕ್ಕಲಿಗರ ಮೇಲೆ ಬಿಜೆಪಿ ವಕ್ರದೃಷ್ಟಿ ಎಂದ ಎಚ್‌ಡಿಕೆ

ಸಿನಿಮಾ ಹೆಸರಾಗಿ ಉರೀಗೌಡ, ನಂಜೇಗೌಡ ಹೆಸರು ನೋಂದಣಿ ಮಾಡಿದ ಮುನಿರತ್ನ ವಿರುದ್ಧ ಕಿಡಿ
Last Updated 17 ಮಾರ್ಚ್ 2023, 15:08 IST
ಅಕ್ಷರ ಗಾತ್ರ

ಬೆಂಗಳೂರು: ‘ಉರಿಗೌಡ ನಂಜೇಗೌಡ’ ಹೆಸರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿರುವ ಸಚಿವ, ನಿರ್ಮಾಪಕ ಮುನಿರತ್ನ ವಿರುದ್ಧ ಜೆಡಿಎಸ್‌ ಮುಖಂಡ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದು, ಈ ಮೂಲಕ ಒಕ್ಕಲಿಗರ ಗೌರವವನ್ನು ಬೆಳ್ಳಿತೆರೆಯ ಮೇಲೆಯೂ ಮೂರಾಬಟ್ಟೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉರಿಗೌಡ ಚಿತ್ರದ ಶೀರ್ಷಿಕೆ ಕುರಿತು ಸರಣಿ ಟ್ವೀಟ್‌ ಮಾಡಿರುವ ಎಚ್‌.ಡಿ.ಕುಮಾರಸ್ವಾಮಿ, ಸಚಿವರು, ವೃತ್ತಿಯಲ್ಲಿ ಚಿತ್ರ ನಿರ್ಮಾಪಕರಾದ ಮುನಿರತ್ನ ಅವರು ತಮ್ಮ ವೃಷಭಾದ್ರಿ ಪ್ರೊಡಕ್ಷನ್ಸ್‌ ಮೂಲಕ ‘ಉರಿಗೌಡ ನಂಜೇಗೌಡ’ ಹೆಸರನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೋಂದಾಯಿಸಿ ಸಿನಿಮಾ ಮಾಡಲು ಹೊರಟಿದ್ದಾರೆ. ಈ ಮೂಲಕ ಒಕ್ಕಲಿಗರ ಗೌರವವನ್ನು ಬೆಳ್ಳಿತೆರೆಯ ಮೇಲೆಯೂ ಮೂರಾಬಟ್ಟೆ ಮಾಡಲು ಸಂಚು ರೂಪಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಕಲ್ಪಿತಕಥೆ, ಸುಳ್ಳುಗಳಿಂದಲೇ ಜನರ ಮನಸ್ಸಿನಲ್ಲಿ ವಿಷಬೀಜ ಬಿತ್ತಿ ಕರ್ನಾಟಕವನ್ನು ಅಲ್ಲೋಲಕಲ್ಲೋಲ ಮಾಡುತ್ತಿರುವ ಬಿಜೆಪಿ ವಕ್ರದೃಷ್ಟಿ ಸದ್ಯಕ್ಕೆ ಒಕ್ಕಲಿಗರ ಮೇಲೆ ಬಿದ್ದಿದೆ. ಸ್ವಾಭಿಮಾನಿ ಒಕ್ಕಲಿಗರನ್ನು ಹೇಗಾದರೂ ಹಳ್ಳ ಹಿಡಿಸಲೆಬೇಕೆಂಬ ಹಿಡೆನ್‌ ಅಜೆಂಡಾ ಬಿಜೆಪಿಗೆ ಇರುವುದಂತೂ ಸತ್ಯ ಎಂದು ಟ್ವೀಟ್‌ನಲ್ಲಿ ಹೇಳಿದ್ದಾರೆ.

ಈ ಮಹಾ ಷಡ್ಯಂತ್ರದ ಭಾಗವೇ ಉರಿಗೌಡ, ನಂಜೇಗೌಡ ಎಂಬ ಸುಳ್ಳುಪಾತ್ರಗಳ ಸೃಷ್ಟಿ. ಟಿಪ್ಪುವನ್ನು ಕೊಂದವರೆಂದು ಸೃಷ್ಟಿಸಲಾದ ಕಲ್ಪಿತ ಒಕ್ಕಲಿಗ ಹೆಸರುಗಳ ಮೂಲಕ ಒಕ್ಕಲಿಗ ಸಮುದಾಯವನ್ನು ಕಳಂಕದ ದಳ್ಳುರಿಗೆ ತಳ್ಳುವ, ಐತಿಹಾಸಿಕ ನಂಜಿನ ವಿಷವರ್ತುಲಕ್ಕೆ ನೂಕುವ ಹೇಯ ಕೃತ್ಯವನ್ನು ಬಿಜೆಪಿ ಮಾಡುತ್ತಿದೆ ಎಂದು ಎಚ್‌ಡಿಕೆ ಆರೋಪಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT