ಶುಕ್ರವಾರ, 3 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷದ ವಿರುದ್ಧದ ಪಿತೂರಿಗಳನ್ನು ಹಿಮ್ಮೆಟ್ಟಿಸಿ: ಎಚ್‌ಡಿಕೆ

Last Updated 12 ನವೆಂಬರ್ 2021, 18:58 IST
ಅಕ್ಷರ ಗಾತ್ರ

ಬೆಂಗಳೂರು: ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ನಮ್ಮ ಪಕ್ಷದ ವಿರುದ್ಧ ನಡೆಯುತ್ತಿರುವ ಪಿತೂರಿಗಳನ್ನು ಸಮರ್ಥವಾಗಿ ಎದುರಿಸಿ ಹಿಮ್ಮೆಟ್ಟಿಸಬೇಕು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಹೇಳಿದರು.

ಜನತಾಪರ್ವ 1.0 ಎರಡನೇ ಹಂತದ ಜನತಾಸಂಗಮದ ಐದನೇ ದಿನವಾದ ಶುಕ್ರವಾರ ಈ ಜಿಲ್ಲೆಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು, ವಿಧಾನಸಭಾ ಚುನಾವಣೆಯ ಸಂಭಾವ್ಯ ಅಭ್ಯರ್ಥಿಗಳನ್ನು ಉದ್ದೇಶಿಸಿ ಅವರು ಮಾತನಾಡಿದರು.

‘ಮಂಡ್ಯ ಜಿಲ್ಲೆ ಜೆಡಿಎಸ್ ಭದ್ರಕೋಟೆ. ಯಾವುದೇ ಕಾರಣಕ್ಕೂ ನಮ್ಮ ನೆಲೆ ಕಳೆದು ಕೊಳ್ಳ ಬಾರದು. ಅದಕ್ಕೆ ಅಗತ್ಯವಾದ ರೀತಿಯಲ್ಲಿ ಸಂಘಟನೆಯನ್ನು ಗಟ್ಟಿ ಮಾಡಬೇಕು.ನಾನು ನಿರಂತರವಾಗಿ ಪ್ರವಾಸ ಮಾಡಿ, ಹಳ್ಳಿಗಳಿಗೂ ಭೇಟಿ ನೀಡುತ್ತೇನೆ. ಜನರ ಸಮಸ್ಯೆಗಳಿಗೆ ಎಲ್ಲರೂ ಸ್ಪಂದಿಸಿ ಬಗೆಹರಿಸುವ ಯತ್ನ ಮಾಡಬೇಕು’ ಎಂದು ಅವರು ಸಲಹೆ ನೀಡಿದರು.

‘ಮುಂಬರುವ ಸ್ಥಳೀಯ ಸಂಸ್ಥೆ ಹಾಗೂ 2023ರ ವಿಧಾನಸಭೆ ಚುನಾವಣೆ ಗುರಿ ಇಟ್ಟುಕೊಂಡು ತಾಲೂಕು ಮತ್ತು ಜಿಲ್ಲಾ ಮಟ್ಟದಲ್ಲಿ ಪಕ್ಷ ಸಂಘಟನೆ ಬಗ್ಗೆ ರಾಜಿ ಇಲ್ಲ. ಎಲ್ಲರೂ ಒಟ್ಟಾಗಿ ಪಕ್ಷ ಕಟ್ಟಲು ಶ್ರಮಿಸಬೇಕು. ಪಕ್ಷದ ಸಂಘಟನೆ ಬಗ್ಗೆ ಯಾರೂ ಮೈಮರೆಯಬಾರದು. ಉಪೇಕ್ಷೆ ಮಾಡಿದರೆ ಸಹಿಸುವುದಿಲ್ಲ’ ಎಂದು ಎಚ್ಚರಿಕೆ ನೀಡಿದರು.

ಕಾರ್ಯಾಗಾರದಲ್ಲಿ ಶಾಸಕರಾದ ಸಿ.ಎಸ್‌. ಪುಟ್ಟರಾಜು, ಸುರೇಶ್ ಗೌಡ, ಕೆ. ಅನ್ನದಾನಿ, ಅಪ್ಪಾಜಿ ಗೌಡ, ಅಶ್ವಿನ್‌ಕುಮಾರ್‌, ಮಹಾದೇವ್, ತಿಪ್ಪೇಸ್ವಾಮಿ, ಮಂಜುನಾಥ್, ಪಕ್ಷದ ಮುಖಂಡ ಎಲ್.ಆರ್.ಶಿವರಾಮೇಗೌಡ, ಮಂಡ್ಯ ಜಿಲ್ಲಾಧ್ಯಕ್ಷ ರಮೇಶ್, ಮೈಸೂರು ಜಿಲ್ಲಾಧ್ಯಕ್ಷ ನರಸಿಂಹ ಸ್ವಾಮಿ, ಚಾಮರಾಜನಗರ ಜಿಲ್ಲಾಧ್ಯಕ್ಷ ಹಾಗೂ ಮೈಸೂರು ನಗರ ಅಧ್ಯಕ್ಷೆ ಪ್ರೇಮಾ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT