ಶನಿವಾರ, ಡಿಸೆಂಬರ್ 5, 2020
21 °C

ಪುಟ್ಟಣ್ಣ ಕುಟುಂಬದವರಿಗೆ ಉದ್ಯೋಗ ಕೊಡಿಸಿದ್ದಾಗಿ ಹೇಳಿಲ್ಲ: ಎಚ್‌ಡಿಕೆ ಸ್ಪಷ್ಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿರುವ ಪುಟ್ಟಣ್ಣ ಕುಟುಂಬದ 10–12 ಜನರಿಗೆ ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ನೇಮಕಾತಿಯಲ್ಲಿ ಕ್ಲಾಸ್ ಒನ್‌ ಉದ್ಯೋಗ ಕೊಡಿಸಿದ್ದೆ ಎಂದು ನಾನು ಹೇಳಿಲ್ಲ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ಪುಟ್ಟಣ್ಣ ಕುಟುಂಬದ 10–12 ಮಂದಿಗೆ ಕ್ಲಾಸ್ ವನ್‌ ನೌಕರಿ ಕೊಡಿಸಿದ್ದೆ: ಎಚ್‌ಡಿಕೆ

‘ಕೇತಗಾನಹಳ್ಳಿ ತೋಟದ ಮನೆಯಲ್ಲಿ ಶಿಕ್ಷಕರೊಂದಿಗೆ ನಡೆದ ಸಭೆಯಲ್ಲಿ, ಪುಟ್ಟಣ್ಣ ಕುಟುಂಬದ 10–12 ಜನಕ್ಕೆ ಕ್ಲಾಸ್ ಒನ್ ಹುದ್ದೆ ಕೊಡಿಸಿದ್ದೇನೆ. 1999-2000 ರಲ್ಲಿ ನನ್ನ ಅಧಿಕಾರ ಅವಧಿಯಲ್ಲಿ ಉಪನ್ಯಾಸಕರ ನೇಮಕಾತಿ ನಡೆದಿತ್ತು. ಆಗ ಎಚ್‌.ಎನ್‌. ಕೃಷ್ಣ ಕೆಪಿಎಸ್‌ಸಿ ಅಧ್ಯಕ್ಷರಾಗಿದ್ದರು. ಆದರೆ ಈ (ಪುಟ್ಟಣ್ಣ) ವ್ಯಕ್ತಿ ಅವರಿವರ ಅರ್ಜಿ ಹಿಡಿದುಕೊಂಡು ಬಂದು, ನೂರಾರು ಮಂದಿಗೆ ಉದ್ಯೋಗ ಕೊಡಿಸಿಕೊಂಡಿದ್ದಾರೆ’ ಎಂದು ನಾನು ಹೇಳಿದ್ದಾಗಿ ‘ಪ್ರಜಾವಾಣಿ’ಯಲ್ಲಿ ವರದಿ ಪ್ರಕಟವಾಗಿದೆ. ಈ ರೀತಿಯ ಹೇಳಿಕೆಯನ್ನು ನಾನು ನೀಡಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ: ಕುಕೃತ್ಯ ಒಪ್ಪಿಕೊಂಡ ಕುಮಾರಸ್ವಾಮಿ ಅವರ ವಿರುದ್ಧ ತನಿಖೆಯಾಗಲಿ: ರವಿಕೃಷ್ಣಾ ರೆಡ್ಡಿ

‘1999ರಲ್ಲಿ ನಾನು ಮುಖ್ಯಮಂತ್ರಿ ಆಗಿರಲಿಲ್ಲ. ಆಗ ಎಸ್. ಎಂ. ಕೃಷ್ಣ ಮುಖ್ಯಮಂತ್ರಿಗಳಾಗಿದ್ದರು. ಅವರ ಅವಧಿಯಲ್ಲಿ ಎಚ್.ಎನ್‌. ಕೃಷ್ಣ ಕೆಪಿಎಸ್‌ಸಿ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಹೀಗಾಗಿ ನೇಮಕಾತಿಯಲ್ಲಿ ನಾನು ಮಧ್ಯ ಪ್ರವೇಶ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ನಾನು ಹೇಳದೇ ಇರುವುದು ಸುದ್ದಿಯಾಗಿರುವುದರಿಂದಾಗಿ ಸಮಾಜಕ್ಕೆ ತಪ್ಪು ಸಂದೇಶ ಹೋದಂತಾಗಿದೆ’ ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು