ಗುರುವಾರ , ಸೆಪ್ಟೆಂಬರ್ 16, 2021
24 °C

6 ಬ್ಯಾಗ್‌ ಕೊಂಡೊಯ್ದರು ಎಂದೆ, ಪ್ರಧಾನಿಗೆ ಹಣ ಕೊಂಡೊಯ್ದರು ಎಂದೆನೇ? ಎಚ್‌ಡಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ದೆಹಲಿಗೆ ಹೋಗುವಾಗ ವಿಶೇಷ ವಿಮಾನದಲ್ಲಿ ಆರು ಬ್ಯಾಗ್‌ಗಳಲ್ಲಿ ತೆಗೆದುಕೊಂಡು ಹೋಗಿದ್ದು ಏನು ಎಂದು ನಾನು ಕೇಳಿದ್ದೆ. ಪ್ರಧಾನಿಗೆ ಹಣ ಕೊಂಡೊಯ್ದಿದ್ದಾರೆ ಎಂದು ನಾನು ಹೇಳಿದ್ದೇನೆಯೇ’ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಪ್ರಶ್ನಿಸಿದರು.

ಜೆಡಿಎಸ್‌ ಕಚೇರಿ ಜೆ.ಪಿ. ಭವನದಲ್ಲಿ ಸೋಮವಾರ ವಿವಿಧ ಜಿಲ್ಲೆಗಳ ಪಕ್ಷದ ಮುಖಂಡರ ಸಭೆ ನಡೆಸುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ತಮ್ಮ ಹೇಳಿಕೆ ಕುರಿತು ಬಿಜೆಪಿ ನಾಯಕರ ಆಕ್ಷೇಪಗಳಿಗೆ ಪ್ರತಿಕ್ರಿಯಿಸಿದರು.

‘ನಾನು ತಪ್ಪು ಅರ್ಥದಲ್ಲಿ ಹೇಳಿಕೆ ನೀಡಿರಲಿಲ್ಲ. ನಾನೂ ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಪ್ರಧಾನಿ ಮತ್ತು ಕೇಂದ್ರ ಸಚಿವರನ್ನು ಭೇಟಿ ಮಾಡಲು ಹೋಗುವಾಗ ಶಾಲು, ಮೈಸೂರು ಪೇಟ ಕೊಂಡೊಯ್ಯುತ್ತಿದ್ದೆವು. ಲಘುವಾದ ಅರ್ಥದಲ್ಲಿ ಮಾತಾಡಿಲ್ಲ’ ಎಂದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರದ್ದು ಎನ್ನಲಾದ ಆಡಿಯೊ ತುಣುಕು ಹರಿದಾಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ‘ಇತ್ತೀಚೆಗೆ ಆಡಿಯೊ, ವಿಡಿಯೊ ಹರಿದಾಡುವುದು ಹೆಚ್ಚಾಗಿದೆ. ಮಾತನಾಡುವಾಗ ಎಚ್ಚರ ಇರಬೇಕು. ತನಿಖೆ ನಡೆದರೆ ಏನೂ ಆಗುವುದಿಲ್ಲ’ ಎಂದು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು