ಬುಧವಾರ, ಡಿಸೆಂಬರ್ 1, 2021
26 °C

DNP ಕೊಲೆಗಡುಕ ಸರ್ಕಾರ: ಎಚ್‌ಡಿಕೆ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕೋವಿಡ್‌ನಿಂದ ಮೃತಪಟ್ಟಿದ್ದ ಬಿಎಂಟಿಸಿ ನೌಕರನ ಪತ್ನಿ ಮತ್ತು ಮಕ್ಕಳು ಆತ್ಮಹತ್ಯೆ ಮಾಡಿಕೊಳ್ಳಲು ರಾಜ್ಯ ಸರ್ಕಾರವೇ ಹೊಣೆ. ಇದು ಕೊಲೆಗಡುಕ ಸರ್ಕಾರ ಎಂದು ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಟೀಕಿಸಿದ್ದಾರೆ.

ಈ ಕುರಿತು ಭಾನುವಾರ ಸರಣಿ ಟ್ವೀಟ್‌ ಮಾಡಿರುವ ಅವರು, ‘ಇದೊಂದು ಹೃದಯ ವಿದ್ರಾವಕ ಘಟನೆ. ನಿಗದಿತ ಸಮಯದೊಳಗೆ ಆ ಕುಟುಂಬಕ್ಕೆ ಪರಿಹಾರ ಮತ್ತು ಅನುಕಂಪದ ಆಧಾರದ ಮೇಲೆ ನೌಕರಿ ನೀಡಿದ್ದರೆ ಮೂರು ಅಮೂಲ್ಯ ಜೀವಗಳನ್ನು ಉಳಿಸಬಹುದಿತ್ತು’ ಎಂದಿದ್ದಾರೆ.

‘ಸರ್ಕಾರ ಎಲ್ಲ ದುಂದು ವೆಚ್ಚ, ಲೂಟಿ ನಿಲ್ಲಿಸಿ ಇಂಥವರ ನೆರವಿಗೆ ಧಾವಿಸಬೇಕಿತ್ತು. ಈ ರೀತಿಯ ಪ್ರಕರಣಗಳ ಇತ್ಯರ್ಥಕ್ಕೆ ಆದ್ಯತೆ ನೀಡಬೇಕಿತ್ತು. ಈ ವಿಚಾರದಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ. ಅಧಿಕಾರಿಗಳ ಹೊಣೆಗೇಡಿತನ ಎದ್ದು ಕಾಣುತ್ತಿದೆ’ ಎಂದು ಹೇಳಿದ್ದಾರೆ.

‘ಘಟನೆಗೆ ಕಾರಣವಾದ ಎಲ್ಲ ಅಧಿಕಾರಿಗಳನ್ನು ತಕ್ಷಣ ಅಮಾನತು ಮಾಡಬೇಕು. ಸ್ವತಃ ಮುಖ್ಯಮಂತ್ರಿಯವರೇ ಗಮನಹರಿಸಿ, ಕೋವಿಡ್‌ನಿಂದ ಮೃತಪಟ್ಟಿರುವ ಎಲ್ಲ ಸಾರಿಗೆ ನೌಕರರ ಕುಟುಂಬಗಳಿಗೆ ನೆರವಾಗಬೇಕು. ಮುಂದೆ ಇಂಥ ಅನಾಹುತಗಳು ನಡೆಯದಂತೆ ಎಚ್ಚರ ವಹಿಸಬೇಕು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.