ಸೋಮವಾರ, ಜೂನ್ 14, 2021
22 °C

40 ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕಗಳ ಸ್ಥಾಪನೆಗೆ ಅನುಮೋದನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: 10 ಜಿಲ್ಲಾ ಆಸ್ಪತ್ರೆಗಳು ಮತ್ತು 30 ತಾಲ್ಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಉತ್ಪಾದನಾ ಘಟಕಗಳ ಸ್ಥಾಪನೆಗೆ ಆರೋಗ್ಯ ಇಲಾಖೆ ಅನುಮೋದನೆ ನೀಡಿದೆ.

ಕೋವಿಡ್-19 ತುರ್ತು ಪರಿಸ್ಥಿತಿ ಹಿನ್ನೆಲೆಯಲ್ಲಿ ಈ ವಿಷಯವನ್ನು ತುರ್ತಾಗಿ ಪರಿಗಣಿಸಿ ಕೂಡಲೇ ಕ್ರಮ ಜರುಗಿಸಲು ಸೂಚಿಸಲಾಗಿದೆ. 

ಎಲ್ಲ 40 ಆಸ್ಪತ್ರೆಗಳಲ್ಲಿ  ಆಮ್ಲಜನಕ ಉತ್ಪಾದನಾ ಘಟಕಗಳ ಸ್ಥಾಪನೆಗೆ ಸಿವಿಲ್ ಹಾಗೂ ವಿದ್ಯುತ್ ಕಾಮಗಾರಿಗಳನ್ನು ತಕ್ಷಣವೇ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನುರಿತ ಅರ್ಹ ಗುತ್ತಿದಾರರಿಂದ ಅನುಷ್ಠಾನಗೊಳಿಸಲು ನಿರ್ದೇಶಿಸಿದೆ. 

10 ಜಿಲ್ಲಾ ಆಸ್ಪತ್ರೆಗಳಲ್ಲಿ 500 ಎಲ್‌ಪಿಎಂ (ವಿಎಸ್‌ಎ ತಂತ್ರಜ್ಞಾನ) ಮತ್ತು 30 ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ 390 ಎಲ್‌ಪಿಎಂ (ಪಿಎಸ್‌ಎ ತಂತ್ರಜ್ಞಾನ) ಸಾಮರ್ಥ್ಯದ ಆಮ್ಲಜನಕ ಉತ್ಪಾದನಾ ಘಟಕಗಳನ್ನು ಸ್ಥಾಪಿಸಲಾಗುವುದು. 

40 ಆಸ್ಪತ್ರೆಗಳ ಪಟ್ಟಿಯಲ್ಲಿ ಬೆಂಗಳೂರು, ಕಲಬುರ್ಗಿ, ಮೈಸೂರು, ಉತ್ತರ ಕನ್ನಡ, ಮೈಸೂರು, ದಕ್ಷಿಣ ಕನ್ನಡ, ಗದಗ, ಹಾಸನ, ಶಿವಮೊಗ್ಗ ಸೇರಿದಂತೆ ರಾಜ್ಯದ ಪ್ರಮುಖ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳು ಸೇರಿವೆ. 

ಸಂಪೂರ್ಣ ಪಟ್ಟಿ ಇಲ್ಲಿದೆ:
 

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು