ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಇಲಾಖೆ: ಗುತ್ತಿಗೆ ಸಿಬ್ಬಂದಿ ಅವಧಿ ವಿಸ್ತರಣೆ

Last Updated 13 ಅಕ್ಟೋಬರ್ 2020, 20:40 IST
ಅಕ್ಷರ ಗಾತ್ರ

ಬೆಂಗಳೂರು: ಕೊರೊನಾ ಸೋಂಕಿತರ ಚಿಕಿತ್ಸೆಗಾಗಿ 18 ಜಿಲ್ಲೆಗಳಲ್ಲಿ ತಾತ್ಕಾಲಿಕವಾಗಿ ನೇಮಿಸಿಕೊಂಡಿರುವ ಜಿಲ್ಲಾವಾರು ತಲಾ 45 ವೈದ್ಯಕೀಯ ಸಿಬ್ಬಂದಿಯ ಸೇವಾಅವಧಿಯನ್ನು ಡಿಸೆಂಬರ್‌ 31ರವರೆಗೆ ವಿಸ್ತರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.

ಪ್ರತಿ ಜಿಲ್ಲೆಯಲ್ಲಿ ತಲಾ 10 ವೈದ್ಯರು, 20 ಶುಶ್ರೂಷಕರು, ಐವರು ಪ್ರಯೋಗ ಶಾಲಾ ತಂತ್ರಜ್ಞರು ಮತ್ತು 10 ಮಂದಿ ‘ಡಿ’ ದರ್ಜೆ ನೌಕರರನ್ನು ಆರು ತಿಂಗಳ ಅವಧಿಗೆ ನೇಮಿಸಿಕೊಳ್ಳಲು ಮಾರ್ಚ್‌ 30ರಂದು ಅನುಮತಿ ನೀಡಲಾಗಿತ್ತು. ಸೆಪ್ಟೆಂಬರ್‌ ಅಂತ್ಯಕ್ಕೆ ಆರು ತಿಂಗಳ ಅವಧಿ ಕೊನೆಗೊಂಡಿತ್ತು. ಸೋಂಕಿತರ ಸಂಖ್ಯೆ ಏರುಗತಿಯಲ್ಲಿ ಇರುವುದರಿಂದ ಎಲ್ಲ ಸಿಬ್ಬಂದಿಯ ಅವಧಿ ವಿಸ್ತರಿಸುವಂತೆ ಆರೋಗ್ಯ ಇಲಾಖೆ ಆಯುಕ್ತರು ಪ್ರಸ್ತಾವ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT