ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಇಲಾಖೆ ಭ್ರಷ್ಟಾಚಾರದ ರಾಜ: ಡಿ.‌ಕೆಂಪಣ್ಣ

Last Updated 13 ಏಪ್ರಿಲ್ 2022, 9:46 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ಆರೋಗ್ಯ ಇಲಾಖೆ ಭ್ರಷ್ಟಾಚಾರದ ರಾಜನಿದ್ದಂತೆ. ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಭಾರಿ ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಆರೋಪಿಸಿದರು.

ಸುದ್ದಿಗಾರರ ಜತೆ ಬುಧವಾರ ಮಾತನಾಡಿದ ಅವರು, 'ಆರೋಗ್ಯ ಇಲಾಖೆಯಲ್ಲಿ ಲಂಚವಿಲ್ಲದೆ ಏನೂ ನಡೆಯುತ್ತಿಲ್ಲ. ಇದರಿಂದ ಗುತ್ತಿಗೆದಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ' ಎಂದರು.

ಆರೋಗ್ಯ ಇಲಾಖೆಯಲ್ಲಿ ₹2,000 ಕೋಟಿ ಮೊತ್ತದ ಕಟ್ಟಡ ನಿರ್ಮಾಣ ಕಾಮಗಾರಿಗಳು ನಡೆಯುತ್ತಿವೆ. ಟೆಂಡರ್‌ಗಳಿಗೆ ಅನುಮೋದನೆಗೆ ಸಚಿವ ಸುಧಾಕರ್ ಶೇಕಡ 5ರಷ್ಟು ಲಂಚ ಪಡೆಯುತ್ತಾರೆ ಎಂದು ಆರೋಪಿಸಿದರು.

ಕುಟುಂಬದವರಿಂದ ಗುತ್ತಿಗೆ: ಸಚುವ ಸುಧಾಕರ್ ಸಂಬಂಧಿಕರೇ ಆರೋಗ್ಯ ಇಲಾಖೆಯಲ್ಲಿ ಕಾಮಗಾರಿಗಳ ಗುತ್ತಿಗೆ ಪಡೆದಿದ್ದಾರೆ. ಸಚಿವರ ಪತ್ನಿಯ ಸಹೋದರ ಗುತ್ತಿಗೆ ನಿರ್ವಹಿಸುತ್ತಿದ್ದು, ಸಚಿವರ ಪತ್ನಿ ಹೂಡಿಕೆ ಮಾಡಿರುವ ದಾಖಲೆಗಳಿವೆ ಎಂದು ಕೆಂಪಣ್ಣ ದೂರಿದರು.

ಆರೋಗ್ಯ ಇಲಾಖೆಯ ಕಾಮಗಾರಿಗಳ ಗುತ್ತಿಗೆ ಲಂಚ‌ ಕೊಟ್ಟವರಿಗಷ್ಟೇ ದೊರಕುತ್ತಿದೆ. ಸಚಿವರು ಚೀಟಿ ಕೊಟ್ಟರೆ ಮಾತ್ರ ಕೆಲಸ ಆಗುತ್ತದೆ ಎಂದರು.

ಲೋಕೋಪಯೋಗಿ, ಜಲ‌ ಸಂಪನ್ಮೂಲ ಸೇರಿದಂತೆ ಹಲವು ಇಲಾಖೆಗಳಲ್ಲಿ ಲಂಚದ ಹಣ ಸಂಗ್ರಹಕ್ಕೆ ಏಜೆಂಟರನ್ನು ನೇಮಿಸಲಾಗಿದೆ ಎಂದು ಆರೋಪಿಸಿದರು.

ಇವುಗಳನ್ನೂ ಒದಿ..

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT