ಬುಧವಾರ, ಮೇ 18, 2022
25 °C

6,463 ಗುತ್ತಿಗೆ ನೌಕರರ ಕೈಬಿಟ್ಟ ಆರೋಗ್ಯ ಇಲಾಖೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್ ನಿರ್ವಹಣೆಗೆ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ನೇಮಕವಾಗಿದ್ದ 6,463 ನೌಕರರ ಸೇವಾ ಅವಧಿ ವಿಸ್ತರಿಸುವ ಪ್ರಸ್ತಾವ ತಿರಸ್ಕೃತಗೊಂಡಿದೆ.

ಕೋವಿಡ್ ನಾಲ್ಕನೇ ಅಲೆಯ ಮುನ್ನೆಚ್ಚರಿಕಾ ಕ್ರಮವಾಗಿ ಇವರ ಗುತ್ತಿಗೆ ಅವಧಿಯನ್ನು ಇದೇ ಜೂನ್‌ 30ರವರೆಗೆ ವಿಸ್ತರಿಸಲು ಇಲಾಖೆ ಆಯುಕ್ತರು ಪ್ರಸ್ತಾವನೆ ಸಲ್ಲಿಸಿದ್ದರು. ಸದ್ಯ ಕೋವಿಡ್ ನಿಯಂತ್ರಣಕ್ಕೆ ಬಂದಿರುವುದರಿಂದ ಇಲಾಖೆಯ ಪ್ರಧಾನ ಕಾರ್ಯದರ್ಶಿ ಈ ಪ್ರಸ್ತಾವ ತಿರಸ್ಕರಿಸಿದ್ದಾರೆ.

ಆರ್ಥಿಕ ಇಲಾಖೆಯ ಅಭಿಪ್ರಾಯದ ಅನ್ವಯ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಅವಧಿ ವಿಸ್ತರಿಸಲು ಸಾಧ್ಯವಿಲ್ಲ ಎಂದು ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು