ಭಾನುವಾರ, ಏಪ್ರಿಲ್ 18, 2021
26 °C
ಜಾಗೃತಿ, ಪ್ರಧಾನಿಗೆ ವಿಡಿಯೊ ಟ್ಯಾಗ್ ಮಾಡಿದ ಸಚಿವ

ಲಸಿಕೆ ಹಾಕಿಸಿಕೊಳ್ಳುವಂತೆ ಡಂಗುರ ಪ್ರಚಾರ: ಆರೋಗ್ಯ ಸಚಿವ ಸುಧಾಕರ್‌ ಮೆಚ್ಚುಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನರೇಗಲ್: ಸಮೀಪದ ಜಕ್ಕಲಿ ಗ್ರಾಮದ ಜಾನಪದ ಕಲಾವಿದ ವೀರಪ್ಪ ಕಾಳಿ ಕೋವಿಡ್‌ ಲಸಿಕೆ ಪಡೆಯುವಂತೆ ಶನಿವಾರ ಮಧ್ಯಾಹ್ನ ಗ್ರಾಮದ ತುಂಬಾ ಡಂಗುರ ಬಾರಿಸಿ ಕೂಗಿ ಹೇಳುವ ಮೂಲಕ ಜನರಲ್ಲಿ ಜಾಗೃತಿ ಮೂಡಿಸಿದ್ದಾರೆ. 

ಆ ವಿಡಿಯೊವನ್ನು ಆರೋಗ್ಯ ಸಚಿವ ಡಾ. ಸುಧಾಕರ್‌ ಅವರು ತಮ್ಮ ಟ್ವಿಟರ್ ಹಾಗೂ ಫೇಸ್‌ಬುಕ್ ಖಾತೆಯಲ್ಲಿ ಅಪ್ಲೋಡ್ ಮಾಡುವ ಮೂಲಕ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ವಿಡಿಯೊವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಟ್ಯಾಗ್ ಮಾಡಿದ್ದಾರೆ.

ಗದಗ ಜಿಲ್ಲೆಯ ಜಕ್ಕಲಿ ಗ್ರಾಮದ ಹಳ್ಳಿಯಲ್ಲಿ ಲಸಿಕೆ ಪಡೆಯುವುದರ ಬಗ್ಗೆ ಗ್ರಾಮೀಣ ಸಾಂಪ್ರದಾಯಕ ಪದ್ಧತಿ ಮೂಲಕ ಡಂಗುರ ಬಾರಿಸಿ ಜಾಗೃತಿ ಮೂಡಿಸುತ್ತಿರುವ ದೃಶ್ಯ ಪ್ರೇರಣಾದಾಯಕವಾಗಿದೆ. ಇದೇ ಮಾದರಿಯಲ್ಲಿ ಕೋವಿಡ್–19 ಲಸಿಕೆಯ ಕುರಿತು ಜನಾಂದೊಲನ ದೇಶಾದ್ಯಂತ ಆಗಬೇಕು ಎಂದು ಅವರು ಬರೆದುಕೊಂಡಿದ್ದಾರೆ.

‘ನರೇಗಲ್ ಆರೋಗ್ಯ ಕೇಂದ್ರದ ಸಿಬ್ಬಂದಿ ಹಾಗೂ ನಮ್ಮೂರಿನ ಗ್ರಾಮ ಪಂಚಾಯ್ತಿ ಸಿಬ್ಬಂದಿ ಕೋವಿಡ್‌ ಲಸಿಕೆ ಹಾಕಿಸಿಕೊಳ್ಳುವಂತೆ ಡಂಗುರ ಬಾರಿಸಿ ಜಾಗೃತಿ ಮೂಡಿಸು ಎಂದು ಹೇಳಿದರು. ಅದರಂತೆ ನಾನು ಮಾಡಿದೆ. ಆದರೆ ರಾಜ್ಯ ಆರೋಗ್ಯ ಸಚಿವರು ಮೆಚ್ಚುಗೆ ವ್ಯಕ್ತಪಡಿಸುತ್ತಾರೆ, ನನ್ನ ವಿಡಿಯೊ ಪ್ರಧಾನಿಯವರಿಗೆ ಟ್ಯಾಗ್ ಆಗುತ್ತದೆ ಎಂದು ಊಹಿಸಿರಲಿಲ್ಲ. ಸದ್ಯದಲ್ಲೇ ನಾನು ನರೇಗಲ್ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಲಸಿಕೆ ಪಡೆಯುತ್ತೇನೆ’ ಎಂದು ವೀರಪ್ಪ ಕಾಳಿ ಅವರು ಹೇಳಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು