ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೊದಲ ಹಂತದಲ್ಲಿ 6.30 ಲಕ್ಷ ಮಂದಿಗೆ ಕೋವಿಡ್‌ ಲಸಿಕೆ: ಸಚಿವ ಸುಧಾಕರ್

ಲಸಿಕೆ ವಿತರಣೆಗೆ ಸಕಲ ಸಿದ್ಧತೆ
Last Updated 5 ಜನವರಿ 2021, 15:28 IST
ಅಕ್ಷರ ಗಾತ್ರ

ಬೆಂಗಳೂರು: ಭಾರತದಲ್ಲಿ ಕೊರೊನಾ ಲಸಿಕೆ ವಿತರಣೆ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದ್ದು, ರಾಜ್ಯ ಸರ್ಕಾರ ಸುವ್ಯವಸ್ಥಿತ ಲಸಿಕೆ ವಿತರಣೆಗೆ ಸಕಲ ಸಿದ್ಧತೆ ನಡೆಸಿದೆ ಎಂದು ವೈದ್ಯಕೀಯ ಮತ್ತು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಸರಣಿ ಟ್ವೀಟ್‌ ಮಾಡಿರುವ ಅವರು, ‘ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಿದ್ದು, 2,73,211 ಸರ್ಕಾರಿ ಹಾಗೂ 3,57,313 ಖಾಸಗಿ ಸೇರಿ ಒಟ್ಟು 6,30,524 ಅರೋಗ್ಯ ಕಾರ್ಯಕರ್ತರನ್ನು ಗುರುತಿಸಲಾಗಿದೆ’ ಎಂದಿದ್ದಾರೆ.

ಲಸಿಕೆ ನೀಡಲು ತರಬೇತಿ ಪಡೆದ 9,807 ಅನುಭವಿ ವ್ಯಾಕ್ಸಿನೇಟರ್ ಸಿಬ್ಬಂದಿಗಳನ್ನು ಮತ್ತು ರಾಜ್ಯದಾದ್ಯಂತ 28,427 ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಇನ್ನೂ ಹೆಚ್ಚಿನ ಕೇಂದ್ರಗಳನ್ನು ಗುರುತಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ಎಲ್ಲಾ ದತ್ತಾಂಶವನ್ನು ಕೇಂದ್ರ ಸರ್ಕಾರ ಸಿದ್ಧಪಡಿಸಿರುವ CoWIN ತಂತ್ರಾಂಶದಲ್ಲಿ ನಮೂದಿಸಲಾಗಿದೆ. ರಾಜ್ಯಕ್ಕೆ ಅವಶ್ಯಕತೆ ಇರುವ ಹೆಚ್ಚಿನ ಮೂಲಸೌಕರ್ಯವನ್ನು ಕೇಂದ್ರ ಸರ್ಕಾರ ಪೂರೈಸುತ್ತಿದ್ದು, ಈವರೆಗೂ 64 ಬೃಹತ್ ಐಸ್‌ ಲೈನ್ಡ್ ರೆಫ್ರಿಜರೇಟರ್ (ILR), 24 ಲಕ್ಷ ಸಿರಿಂಜುಗಳು ರಾಜ್ಯಕ್ಕೆ ಬಂದಿದ್ದು ಜಿಲ್ಲೆಗಳಿಗೆ ರವಾನಿಸಲಾಗಿದೆ. ಇನ್ನುಳಿದ 31 ಲಕ್ಷ ಸಿರಿಂಜುಗಳು ಸೇರಿದಂತೆ ಹೆಚ್ಚುವರಿ ಉಪಕರಣಗಳು ಶೀಘ್ರದಲ್ಲೇ ತಲುಪಿಲಿವೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT