ಸೋಮವಾರ, ಏಪ್ರಿಲ್ 12, 2021
25 °C

ಕೋವಿಡ್‌ ಪ್ರಕರಣ ಹೆಚ್ಚಳ: ಎಚ್ಚರ ಅಗತ್ಯ ಎಂದ ಆರೋಗ್ಯ ಸಚಿವ ಸುಧಾಕರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ‘ಪಕ್ಕದ ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿವೆ. ಇದು ರಾಜ್ಯಕ್ಕೆ ಎಚ್ಚರಿಕೆಯ ಗಂಟೆಯಾಗಿದ್ದು ಎಲ್ಲರೂ ಜಾಗರೂಕರಾಗಿರಬೇಕು’ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ‘ಹಬ್ಬದ ಸಂದರ್ಭಗಳಲ್ಲಿ, ಸಭೆ–ಸಮಾರಂಭಗಳಲ್ಲಿ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ಅಂತರವನ್ನು ಕಾಪಾಡಿಕೊಳ್ಳಬೇಕು ಹಾಗೂ ಜನಸಂದಣಿಯಿಂದ ದೂರವಿರಬೇಕು’ ಎಂದು ಸಲಹೆ ನೀಡಿದ್ದಾರೆ.

ಲಸಿಕೆ ಪಡೆಯಲು ಮುಂದಾಗಿ: ‘60 ವರ್ಷ ಮೇಲ್ಪಟ್ಟವರು, ಗಂಭೀರ ಕಾಯಿಲೆ ಇರುವ 45 ವರ್ಷ ಮೇಲ್ಪಟ್ಟು  ಹೊಂದಿರುವವರು ತಪ್ಪದೇ ಆದಷ್ಟು ಬೇಗ ಕೊರೊನಾ ಲಸಿಕೆ ಪಡೆಯಬೇಕು’ ಎಂದೂ ಅವರು ಕೋರಿದ್ದಾರೆ. 

ನೆರೆಹೊರೆಯವರು, ಲಸಿಕೆ ಹಾಕಿಸುವಂತೆ ಅರಿವು ಮೂಡಿಸಿ ಎಂದೂ ಅವರು ಮನವಿ ಮಾಡಿದ್ದಾರೆ.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು