ಬೆಂಗಳೂರು: ಕೋವಿಡ್ ನಂತರದ ಕಾಲದಲ್ಲಿ ದೇಶದ ಸಮಗ್ರ ಆರ್ಥಿಕ ಸುಧಾರಣೆಗೆ ಬಜೆಟ್ ಒತ್ತು ನೀಡಿದೆ. ಇದರಿಂದಾಗಿ ಜಾಗತಿಕ ಮಟ್ಟದಲ್ಲಿ ಭಾರತ ಸದೃಢವಾಗಿ ಬೆಳೆಯಲು ವೇಗ ದೊರೆತಂತಾಗಿದೆ. ಜೊತೆಗೆ ಆರೋಗ್ಯ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸಲು ಆದ್ಯತೆ ದೊರೆತಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

ಸ್ವಾತಂತ್ರ್ಯದ 100ನೇ ವರ್ಷದತ್ತ ಸಾಗುತ್ತಿರುವ ಈ ಅಮೃತ ಕಾಲದಲ್ಲಿ, ದೇಶವನ್ನು ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಗೆ ತರಲು ಭದ್ರ ಅಡಿಪಾಯ ಹಾಕುವ ನಿಟ್ಟಿನಲ್ಲಿ ಬಜೆಟ್ ರೂಪಿಸಲಾಗಿದೆ. ಅದರಲ್ಲೂ, ಆರೋಗ್ಯ ಕ್ಷೇತ್ರದಲ್ಲಿ ಹೊಸ ಯೋಜನೆ, ಕ್ರಮಗಳನ್ನು ತಂದು ಜನರ ಜೀವನ ಗುಣಮಟ್ಟ ಅಭಿವೃದ್ಧಿಪಡಿಸಲು ಕ್ರಮ ವಹಿಸಲಾಗಿದೆ ಎಂದು ಪ್ರತಿಕ್ರಿಯೆ ನೀಡಿದ್ದಾರೆ.

ದೇಶದಲ್ಲಿ ಈವರೆಗೆ 166 ಕೋಟಿಗೂ ಅಧಿಕ ಲಸಿಕೆಗಳನ್ನು ನೀಡುವ ಮೂಲಕ ಜನರ ಜೀವ, ಜೀವನೋಪಾಯ ಎರಡನ್ನೂ ರಕ್ಷಿಸಲಾಗಿದೆ. ಲಸಿಕಾಕರಣ ಕೋವಿಡ್ ನಂತರದ ಆರ್ಥಿಕ ಪುಶ್ಚೇತನಕ್ಕೆ ವೇಗ ನೀಡಿದೆ. ಈ ನಿಟ್ಟಿನಲ್ಲಿ ಆರ್ಥಿಕ ಸಚಿವರಾದ ನಿರ್ಮಲಾ ಸೀತಾರಾಮನ್ ಹಾಗೂ ಪ್ರಧಾನಿ ನರೇಂದ್ರ ಮೋದಿಯವರು ದಿಟ್ಟ ಹೆಜ್ಜೆಯನ್ನಿಟ್ಟಿದ್ದಾರೆ.

ಮಾನಸಿಕ ಆರೋಗ್ಯಕ್ಕೆ ಒತ್ತು: ಕೋವಿಡ್ ಬಂದ ನಂತರ ಜನರು ಮಾನಸಿಕ ಒತ್ತಡಕ್ಕೆ ಒಳಗಾಗಿರುವುದನ್ನು ಗಮನಿಸಿರುವ ಕೇಂದ್ರ ಸರ್ಕಾರ, ಇದಕ್ಕಾಗಿ ಬೆಂಗಳೂರಿನ ಪ್ರತಿಷ್ಠಿತ ನಿಮ್ಹಾನ್ಸ್ ಆಸ್ಪತ್ರೆಯನ್ನು ಆರಿಸಿಕೊಂಡು ನ್ಯಾಷನಲ್ ಟೆಲಿ ಮೆಂಟಲ್ ಹೆಲ್ತ್ ಕಾರ್ಯಕ್ರಮ ನೀಡುವುದಾಗಿ ತಿಳಿಸಿದೆ. ಇದು ಸಕಾಲಿಕವಾಗಿದ್ದು, ಇಂದಿನ ಯುವಜನತೆಗೆ ಬಹಳ ಉಪಯೋಗವಾಗಲಿದೆ ಎಂದು ಹೇಳಿದ್ದಾರೆ.

ಕೋವಿಡ್ ನಿಂದ ಅನೇಕರು ಮಾನಸಿಕ ಸಮಸ್ಯೆಗೆ ಒಳಗಾಗಿದ್ದಾರೆ. ರಾಜ್ಯದಲ್ಲಿ ಆರಂಭದಿಂದಲೇ ಮಾನಸಿಕ ಒತ್ತಡಕ್ಕೊಳಗಾದವರನ್ನು ಪತ್ತೆ ಮಾಡಿ ಆಪ್ತ ಸಮಾಲೋಚನೆ ನಡೆಸಲಾಗುತ್ತಿದೆ. ಈವರೆಗೆ, 26.08 ಲಕ್ಷ ಜನರಿಗೆ ಆಪ್ತ ಸಮಾಲೋಚನೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.

ಈಗ ಕೇಂದ್ರ ಬಜೆಟ್ ನಲ್ಲಿ ನ್ಯಾಷನಲ್ ಟೆಲಿ ಮೆಂಟಲ್ ಹೆಲ್ತ್ ಕಾರ್ಯಕ್ರಮ ನೀಡಿದ್ದು, ಇದಕ್ಕಾಗಿ ನ್ಯಾಷನಲ್ ಟೆಲಿ ಮೆಂಟಲ್ ಹೆಲ್ತ್ ಸೆಂಟರ್ ಫಾರ್ ಎಕ್ಸ್ ಲೆನ್ಸ್ ಎಂಬ ಕೇಂದ್ರಗಳನ್ನು ಆರಂಭಿಸಲಾಗುತ್ತದೆ. ಈ ಕಾರ್ಯಕ್ರಮವು 23 ಕೇಂದ್ರಗಳನ್ನು ಒಳಗೊಂಡಿರುತ್ತದೆ. ಇದನ್ನು ಬೆಂಗಳೂರಿನ ನಿಮ್ಹಾನ್ಸ್ ನಿರ್ವಹಣೆ ಮಾಡಲಿದೆ. ಬೆಂಗಳೂರಿನ ಐಐಐಟಿ ಸಂಸ್ಥೆ ತಾಂತ್ರಿಕ ನೆರವು ನೀಡಲಿದೆ. ಇಂತಹ ಅವಕಾಶವನ್ನು ರಾಜ್ಯಕ್ಕೆ ನೀಡಿರುವುದಕ್ಕಾಗಿ ಕೇಂದ್ರ ಸರ್ಕಾರಕ್ಕೆ ಧನ್ಯವಾದಗಳು. ಇದರಿಂದಾಗಿ ಮಾನಸಿಕ ಆರೋಗ್ಯದ ನಿರ್ವಹಣೆಯನ್ನು ಭವಿಷ್ಯದಲ್ಲಿ ಕರ್ನಾಟಕ ಮುಂದಾಳತ್ವ ವಹಿಸಿ ಮಾದರಿಯಾಗಿ ನಿಲ್ಲಲಿದೆ ಎಂದು ಸಚಿವರು ಹೇಳಿದ್ದಾರೆ.

ಓದಿ...

Union Budget 2022: ವಿದ್ಯುತ್ ವಲಯಕ್ಕೆ ದೂರದೃಷ್ಟಿಯ ಸ್ಪರ್ಶ -ಸುನೀಲ್ ಕುಮಾರ್

ಹಸಿದವರ ಹೊಟ್ಟೆಗೆ ತಣ್ಣೀರ ಬಟ್ಟೆ ಹಾಕಿದಂತಿದೆ ಬಜೆಟ್: ಕುಮಾರಸ್ವಾಮಿ ಟೀಕೆ

Union Budget - 2022| ಕೇಂದ್ರ ಬಜೆಟ್ ಬಗ್ಗೆ ಯಾರು ಏನು ಹೇಳಿದರು?

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.