ಬುಧವಾರ, ಜೂನ್ 23, 2021
22 °C

ಕಪ್ಪು ಶಿಲೀಂಧ್ರ ರೋಗಕ್ಕೆ ಉಚಿತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ನಿರ್ಧಾರ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೋವಿಡ್‌ನಿಂದ ಚೇತರಿಸಿಕೊಂಡ ಕೆಲವರಿಗೆ ಅತ್ಯಂತ ಅಪಾಯಕಾರಿ ಕಪ್ಪು ಶಿಲೀಂಧ್ರ ಸೋಂಕು (ಮ್ಯೂಕೋ ರ್ಮೈಕೋಸಿಸ್ ಅಥವಾ ಬ್ಲ್ಯಾಕ್‌ ಫಂಗಸ್) ಕಾಣಿಸಿಕೊಳ್ಳುತ್ತಿದ್ದು, ಅಂತವರಿಗೆ ಉಚಿತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಕಪ್ಪು ಶಿಲೀಂಧ್ರ ಸೋಂಕು ಅನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ರಾಜ್ಯದ ಆರು ಕಡೆ ಚಿಕಿತ್ಸೆ ನೀಡಲು ತೀರ್ಮಾನಿಸಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ರಾಜ್ಯದಲ್ಲಿ ಈವರೆಗೆ 97 ಜನರಿಗೆ ಕಪ್ಪು ಶಿಲೀಂಧ್ರ ರೋಗ ಬಂದಿದೆ. ಈ ರೋಗ ಕಾಣಿಸಿಕೊಂಡ ನಾಲ್ವರು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಆ ಪೈಕಿ, ಮೂವರು ಬೆಂಗಳೂರಿನವರು. ಒಬ್ಬರು ಕೋಲಾರ ಜಿಲ್ಲೆಯವರಾಗಿದ್ದಾರೆ.

‘ಬೆಂಗಳೂರು ಹೊರತುಪಡಿಸಿ ಮೈಸೂರು, ಶಿವಮೊಗ್ಗ ವೈದ್ಯಕೀಯ ಕಾಲೇಜು ಆಸ್ಪತ್ರೆಗಳು, ಜಿಮ್ಸ್, ಕಿಮ್ಸ್, ಕೆಎಂಸಿ ಹಾಗೂ ವೆನ್‌ಲಾಕ್ ಆಸ್ಪತ್ರೆಗಳಲ್ಲಿ ಈ ರೋಗಕ್ಕೆ ಚಿಕಿತ್ಸೆ ನೀಡಲು ಸೂಚಿಸಲಾಗಿದೆ’ ಎಂದು ನೇತ್ರ ತಜ್ಞ ಭುಜಂಗ ಶೆಟ್ಟಿ ತಿಳಿಸಿದ್ದಾರೆ.

ಇದನ್ನೂ ಓದಿ... ರಾಜ್ಯದ 97 ಜನರಲ್ಲಿ ಕಪ್ಪು ಶಿಲೀಂಧ್ರ ರೋಗ ಪತ್ತೆ, ನಾಲ್ವರ ಸಾವು: ಸಚಿವ ಸುಧಾಕರ್‌

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು