ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇದೇ 24ರಿಂದ ಆರೋಗ್ಯ ಸಿಬ್ಬಂದಿ ಮುಷ್ಕರ

ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯ
Last Updated 20 ಸೆಪ್ಟೆಂಬರ್ 2020, 19:31 IST
ಅಕ್ಷರ ಗಾತ್ರ

ಬೆಂಗಳೂರು: ಸಮಾನ ವೇತನ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ, ಆರೋಗ್ಯ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಕಾರ್ಯನಿರ್ವಹಿಸುತ್ತಿರುವಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರು ಸೆ.24 ರಿಂದ ಕೆಲಸ ಸ್ಥಗಿತಗೊಳಿಸಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ.

‘ಕಾಯಂಗೊಳಿಸುವಿಕೆ ಸೇರಿ 14 ಬೇಡಿಕೆಗಳ ಈಡೇರಿಕೆಗೆ ಈ ಹಿಂದೆ ಹೋರಾಟ ನಡೆಸಲಾಗಿತ್ತು. ಪರಿಣಾಮಸರ್ಕಾರವು ಬೇಡಿಕೆಗಳ ಪರಿಶೀಲನೆಗೆ ಸಮಿತಿ ರಚಿಸಿತ್ತು. ಆದರೆ, ಸಮಿತಿಯು ವರದಿ ಸಲ್ಲಿಸದೆ ನಿರ್ಲಕ್ಷ್ಯ ತೋರಿದೆ. ಇದರಿಂದ 30 ಸಾವಿರಕ್ಕೂ ಅಧಿಕ ನೌಕರರಿಗೆ ಅನ್ಯಾಯವಾಗಿದೆ. ಆದ್ದರಿಂದಸರ್ಕಾರದ ಕುರುಡು ನೀತಿಯನ್ನು ವಿರೋಧಿಸಿ ಸೆ.24ರಿಂದ ಕೆಲಸ ಸ್ಥಗಿತ ಮಾಡಲು ನಿರ್ಧರಿಸಿದ್ದೇವೆ’ ಎಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದರಾಜ್ಯಾಧ್ಯಕ್ಷ ವಿಶ್ವಾರಾಧ್ಯ ಯಮೋಜಿ ತಿಳಿಸಿದ್ದಾರೆ.

ಮುಷ್ಕರದ ಪೂರ್ವಭಾವಿಯಾಗಿ ಸೋಮವಾರ (ಸೆ.21) ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಗುವುದು.ಮಂಗಳವಾರದಂದು(ಸೆ.22) ವಿವಿಧ ಆರೋಗ್ಯ ಕಾರ್ಯಕ್ರಮಗಳ ವರದಿ ಸಲ್ಲಿಸದೆ ಅಸಹಕಾರ ಚಳವಳಿ ನಡೆಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT