ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರಾವಳಿ: ಇಂದು ಧಾರಾಕಾರ ಮಳೆ ಸಾಧ್ಯತೆ

Last Updated 8 ಸೆಪ್ಟೆಂಬರ್ 2020, 3:18 IST
ಅಕ್ಷರ ಗಾತ್ರ

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಸೆ.8ರಿಂದ 11ರವರೆಗೆ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಂಗಳವಾರ ಭಾರಿ ಮಳೆಯಾಗುವ ನಿರೀಕ್ಷೆ ಇರುವುದರಿಂದ 'ಆರೆಂಜ್ ಅಲರ್ಟ್' ಘೋಷಿಸಲಾಗಿದೆ.

ಕರಾವಳಿಯಲ್ಲಿ ಗಂಟೆಗೆ 55 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿದ್ದು, ಗರಿಷ್ಠ 3.3. ಮೀಟರ್‌ಗಳಷ್ಟು ಎತ್ತರದ ಅಲೆಗಳು ಏಳುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯಬಾರದು ಎಂದು ಇಲಾಖೆ ಎಚ್ಚರಿಸಿದೆ.

ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಬೀದರ್, ಕಲಬುರ್ಗಿ, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿತ್ರದುರ್ಗ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದ್ದು, 'ಯೆಲ್ಲೊ ಅಲರ್ಟ್' ಘೋಷಿಸಿದೆ.

ಮಳೆ-ಎಲ್ಲಿ, ಎಷ್ಟು?: ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ 24 ಸೆಂ.ಮೀ ಗರಿಷ್ಠ ಮಳೆಯಾಗಿದೆ. ಕಾರ್ಕಳ 11, ಬೈಲಹೊಂಗಲ, ಸಾಗರ, ಶಿವಮೊಗ್ಗ 7, ಚಿಕ್ಕೋಡಿ, ನಿಪ್ಪಾಣಿ, ಕಮಲಾಪುರ, ಬೆಳಗಾವಿ, ಹುಕ್ಕೇರಿ, ಧಾರವಾಡ, ಹೊಳೆನರಸೀಪುರ 3, ಕಾರವಾರ, ಬೀದರ್, ದಾವಣಗೆರೆ, ತೀರ್ಥಹಳ್ಳಿ, ಮೂಡಿಗೆರೆಯಲ್ಲಿ ತಲಾ 2 ಸೆಂ.ಮೀ ಮಳೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT