ಬುಧವಾರ, ಅಕ್ಟೋಬರ್ 21, 2020
22 °C

ಬೆಳಗಾವಿಯಲ್ಲಿ ಭಾರಿ ಮಳೆ: ಪ್ರವಾಹಕ್ಕೆ ಕೊಚ್ಚಿ ಹೋದ ಕಾರು 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಳಗಾವಿ: ಜಿಲ್ಲೆಯ ಹುಕ್ಕೇರಿಯಲ್ಲಿ ಭಾನುವಾರ ಭಾರಿ ಮಳೆ ಸುರಿಯಿತು.‌

ನಿರಂತರ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ಯವ್ಯಸ್ತವಾಗಿತ್ತು. ಮಳೆಯಿಂದಾಗಿ ಸೃಷ್ಟಿಯಾದ ಪ್ರವಾಹಕ್ಕೆ ನಿಂತಿದ್ದ ಕಾರೊಂದು ನೀರಿನಲ್ಲಿ ಕೊಚ್ಚಿಕೊಂಡು ಹೋಯಿತು. ಈ ವಿಡಿಯೊ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದೆ. 

ವೃದ್ಧರೊಬ್ಬರು ನೀರಿನ ಸೆಳೆತಕ್ಕೆ ಸಿಲುಕಿದ್ದರು. ಯುವಕನೊಬ್ಬ ವಿದ್ಯುತ್ ಕಂಬದ ಆಸರೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. 

ಮಳೆಯಿಂದ ಗ್ಯಾರೇಜ್ ಕುಸಿದು ವ್ಯಕ್ತಿ ಸಾವು
ಬೆಳಗಾವಿ:
ಜಿಲ್ಲೆಯ ಹುಕ್ಕೇರಿಯಲ್ಲಿ ಸುರಿದ ಜೋರು ಮಳೆಯಿಂದಾಗಿ ಗ್ಯಾರೇಜ್ ಕುಸಿದುಬಿದ್ದು, ಅದರೊಳಗಿದ್ದ ವ್ಯಕ್ತಿ ಮೃತರಾದರು.

ಅವರನ್ನು ಅಸ್ಲಂ ಮೀರಾಸಾಬ್ ಅಲ್ಲಾಖಾನ್ (52) ಎಂದು ಗುರುತಿಸಲಾಗಿದೆ.

ಸ್ಥಳಕ್ಕೆ ಉಪವಿಭಾಗಾಧಿಕಾರಿ ಅಶೋಕ ತೇಲಿ ಭೇಟಿ ನೀಡಿದ್ದರು.

ಹುಕ್ಕೇರಿಯಲ್ಲಿ ಮಳೆಯಿಂದ ಸಂಕಷ್ಟಕ್ಕೆ ಒಳಗಾದವರಿಗೆ ತಾಲ್ಲೂಕು ಆಡಳಿತದಿಂದ ನೆರವು ಕಲ್ಪಿಸಲಾಗಿದೆ. ಸಂತ್ರಸ್ತರಿಗೆ ಊಟದ ವ್ಯವಸ್ಥೆ ಒದಗಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು