ಭಾನುವಾರ, ಜುಲೈ 25, 2021
22 °C

ಕಲ್ಯಾಣ ಕರ್ನಾಟಕ, ಕರಾವಳಿಯ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕಲಬುರ್ಗಿ/ಮಂಗಳೂರು: ಕಲ್ಯಾಣ ಕರ್ನಾಟಕ, ಕರಾವಳಿಯ ವಿವಿಧ ಜಿಲ್ಲೆಗಳಲ್ಲಿ ಶನಿವಾರವೂ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ತಡೆಗೋಡೆ ಉರುಳಿ ಮಗು ಸೇರಿ ಇಬ್ಬರಿಗೆ ಪೆಟ್ಟಾಗಿದೆ.

ಕಲಬುರ್ಗಿ ಜಿಲ್ಲೆಯಲ್ಲಿ ಸೇಡಂ, ಚಿಂಚೋಳಿ, ಕಮಲಾಪುರ ಮತ್ತು ಯಡ್ರಾಮಿ ತಾಲ್ಲೂಕು ಹಾಗೂ ಬೀದರ್ ತಾಲ್ಲೂಕು ಸೇರಿ ಜಿಲ್ಲೆಯ ಔರಾದ್, ಭಾಲ್ಕಿ, ಹುಮನಾಬಾದ್ ತಾಲ್ಲೂಕಿನ ಕೆಲ ಕಡೆ ಭಾರಿ ಮಳೆಯಾಯಿತು.

ಬೀದರ್‌ನಲ್ಲಿ ಮಾಂಜ್ರಾ ನದಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದ್ದು, ಹಳ್ಳಕೊಳ್ಳಗಳು ಭರ್ತಿಯಾಗಿವೆ. ಬೀದರ್ ತಾಲ್ಲೂಕಿನ ಕಮಠಾಣ, ಬಗದಲ್‌ನಲ್ಲಿ ಕಬ್ಬು ಬೆಳೆ ನೆಲಕ್ಕುರುಳಿದೆ. ಸಂತಪುರ– ಠಾಣಾಕುಶನೂರ ನಡುವೆ ರಸ್ತೆಯು ಕೊಚ್ಚಿ ಹೋಗಿದ್ದು, ವಾಹನಗಳ ಸಂಚಾರ ಸ್ಥಗಿತಗೊಂಡಿದೆ. 

ಕೊಡಗು ಜಿಲ್ಲೆಯಲ್ಲಿ ಮಳೆ ಬಿರುಸುಗೊಂಡಿದ್ದು, ಭಾಗಮಂಡಲ, ನಾಪೋಕ್ಲು, ಕರಿಕೆ, ಕುಟ್ಟ, ಮಾಕುಟ್ಟ ಕಡೆ ಮಳೆಯಾಗುತ್ತಿದೆ. ಹಾಸನ ಜಿಲ್ಲೆಯಲ್ಲಿ ಸಾಧಾರಣ, ಮೈಸೂರು ನಗರದಲ್ಲಿ ತುಂತುರು ಮಳೆಯಾಯಿತು.

ದಕ್ಷಿಣ ಕನ್ನಡದಲ್ಲಿ ಮಂಗಳೂರು, ಬಂಟ್ವಾಳ, ಸುಳ್ಯದಲ್ಲಿ ಧಾರಾಕಾರ ಮಳೆಯಾಗಿದ್ದು, ಬೆಳ್ತಂಗಡಿ, ಪುತ್ತೂರು ಹಾಗೂ  ಉಡುಪಿ ಜಿಲ್ಲೆಯ ಕಾರ್ಕಳ, ಹೆಬ್ರಿ, ಕಾಪು, ಬೈಂದೂರು ತಾಲ್ಲೂಕು ವ್ಯಾಪ್ತಿಯಲ್ಲಿ ಮಳೆಯಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಚಿಕ್ಕಮಗಳೂರು ನಗರ, ಮೂಡಿಗೆರೆ, ಕೊಟ್ಟಿಗೆಹಾರ, ಕಳಸ, ಶೃಂಗೇರಿ, ಕೊಪ್ಪ, ಎನ್‌.ಆರ್‌.ಪುರ ಭಾಗದಲ್ಲಿ ಸಾಧಾರಣ ಮಳೆಯಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಸಾಗರ, ಕೋಣಂದೂರು, ತೀರ್ಥಹಳ್ಳಿ, ಸೊರಬ, ಶಿಕಾರಿಪುರ, ಶಿವಮೊಗ್ಗ ತಾಲ್ಲೂಕಿನಲ್ಲಿ ಸಾಧಾರಣ, ಹೊಸನಗರದಲ್ಲಿ ಜೋರು ಮಳೆಯಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು