ಗುರುವಾರ , ಅಕ್ಟೋಬರ್ 22, 2020
22 °C

ಕರಾವಳಿಯಲ್ಲಿ ಮುಂದುವರಿದ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಕರವಾಳಿಯಲ್ಲಿ ಸತತ ಮೂರನೇ ದಿನವೂ ವರುಣನ ಅಬ್ಬರ ಮುಂದುವರಿದಿದೆ. ಕೊಡಗಿನಲ್ಲಿ ಧಾರಾಕಾರವಾಗಿ ಸುರಿದಿದ್ದರೆ, ಕಲ್ಯಾಣ ಕರ್ನಾಟಕ ಭಾಗದ ಕೆಲವೆಡೆ ಉತ್ತಮ ಮಳೆ ಆಗಿದೆ. ರಾಜ್ಯದ ಉಳಿದ ಭಾಗದಲ್ಲಿ ಸಾಧಾರಣವಾಗಿ ಸುರಿದಿದೆ. ಉಡುಪಿ ಜಿಲ್ಲೆಯ ಕುಂದಾಪುರ ತಾಲ್ಲೂಕಿನ ಬಳ್ಕೂರಿನಲ್ಲಿ ಗರಿಷ್ಠ 20.9 ಸೆಂ.ಮೀ. ಮಳೆ ಬಿದ್ದಿದೆ. ಕೊಡಗು ಜಿಲ್ಲೆಯಾದ್ಯಂತ ಮತ್ತೆ ಧಾರಾಕಾರ ಮಳೆ ಸುರಿಯುತ್ತಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನಮಟ್ಟ ಏರಿಕೆಯಾಗಿದೆ.

ಕಲಬುರ್ಗಿ ಜಿಲ್ಲೆಯ ‌ಅಫಜಲಪುರ, ಕೊಪ್ಪಳ ನಗರ ಹಾಗೂ ಹಿಟ್ನಾಳ, ಮುನಿರಾಬಾದ್ ಹೋಬಳಿ, ರಾಯಚೂರಿನ ಮಾನ್ವಿ, ಕವಿತಾಳ ಮತ್ತು ಸಿರವಾರದಲ್ಲಿ ಉತ್ತಮ ಮಳೆಯಾಗಿದೆ. ಧಾರವಾಡ, ಹಾವೇರಿ, ಬೆಳಗಾವಿ, ಗದಗ, ಉತ್ತರ ಕನ್ನಡ, ಶಿವಮೊಗ್ಗ, ದಾವಣಗೆರೆ ಜಿಲ್ಲೆಯಲ್ಲಿ ಸಾಧಾರಣ ಮಳೆ ಆಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು