ಸೋಮವಾರ, ಆಗಸ್ಟ್ 8, 2022
23 °C

ಹೊಸಪೇಟೆಯಲ್ಲಿ ಎರಡು ತಾಸು ಬಿರುಸಿನ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸಪೇಟೆ: ನಗರ ಹಾಗೂ ಗ್ರಾಮೀಣ ಭಾಗಗಳಲ್ಲಿ ಗುರುವಾರ ಸಂಜೆ ಎರಡು ತಾಸಿಗೂ ಹೆಚ್ಚು ಕಾಲ ಬಿರುಸಿನ ಮಳೆಯಾಗಿದೆ.
ಸಂಜೆ ನಾಲ್ಕು ಗಂಟೆಗೆ ಆರಂಭಗೊಂಡ ಮಳೆ ಸತತ ಗಂಟೆಗೂ ಅಧಿಕ ಸಮಯ ಸುರಿಯಿತು. ಕೆಲಹೊತ್ತು ಬಿಡುವು ಕೊಟ್ಟ ಮಳೆ ಪುನಃ ಸಂಜೆ 6.30ಕ್ಕೆ ಶುರುವಾಗಿ 7.30ರ ವರೆಗೆ ಜೋರಾಗಿ ಬಿತ್ತು. ನಂತರ ಜಿಟಿಜಿಟಿ ಮಳೆ ಮುಂದುವರೆದಿತ್ತು.

ಬೆಳಿಗ್ಗೆಯಿಂದ ಮೋಡ ಮುಸುಕಿದ ವಾತಾವರಣ ಇತ್ತು. ಮಧ್ಯಾಹ್ನ ಕೆಲಹೊತ್ತು ಬಿಸಿಲು ಕಾಣಿಸಿಕೊಂಡಿತ್ತು. ಸಂಜೆಯಾಗುತ್ತಿದ್ದಂತೆ ದಟ್ಟ ಕಾರ್ಮೋಡಗಳು ಕವಿದು ಜೋರಾಗಿ ಮಳೆ ಸುರಿಯಿತು.

ಬಿರುಸಿನ ಮಳೆಗೆ ಪಟೇಲ್‌ ನಗರ, ಚಿತ್ತವಾಡ್ಗಿ, ಬಸವೇಶ್ವರ ಬಡಾವಣೆ, ಚಪ್ಪರದಹಳ್ಳಿಯಲ್ಲಿ ಚರಂಡಿಗಳು ಉಕ್ಕಿ ಹರಿದಿವೆ. ಹೊಲಸು ರಸ್ತೆ ಮೇಲೆಲ್ಲ ಹರಿದಾಡಿ ದುರ್ಗಂಧ ಹರಡಿತು. ತಾಲ್ಲೂಕಿನ ಹಂಪಿ, ಕಮಲಾಪುರ, ಕಡ್ಡಿರಾಂಪುರ, ನಾಗೇನಹಳ್ಳಿ, ಹೊಸೂರು ಸೇರಿದಂತೆ ಹಲವೆಡೆ ಉತ್ತಮ ಮಳೆಯಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು