ಶುಕ್ರವಾರ, ಮೇ 14, 2021
32 °C

ಕೊಡಗು, ಹಾಸನ ಜಿಲ್ಲೆಯಲ್ಲಿ ಉತ್ತಮ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಡಿಕೇರಿ/ಹಾಸನ: ಕೊಡಗು ಜಿಲ್ಲೆಯಾದ್ಯಂತ ಬುಧವಾರ ಧಾರಾಕಾರ ಮಳೆಯಾಗಿದೆ.

ಸುಂಟಿಕೊಪ್ಪ, ಸಿದ್ದಾಪುರ, ಪೊನ್ನಂಪೇಟೆ, ನಾಪೋಕ್ಲು, ಭಾಗಮಂಡಲ, ತಲಕಾವೇರಿ ಹಾಗೂ ಮಡಿಕೇರಿ ಸುತ್ತಮುತ್ತ ಗುಡುಗುಸಹಿತ ಅರ್ಧ ಗಂಟೆ ಮಳೆಯಾಯಿತು.

ಗೋಣಿಕೊಪ್ಪಲು ವ್ಯಾಪ್ತಿಯಲ್ಲಿ ಗಾಳಿಸಹಿತ ಜೋರು ಮಳೆಯಾಗಿದ್ದು, ಗ್ರಾಮೀಣ ಪ್ರದೇಶದ ಅಲ್ಲಲ್ಲಿ ವಿದ್ಯುತ್‌ ಕಂಬಗಳು ಧರೆಗುರುಳಿದ್ದು, ವಿದ್ಯುತ್‌ ವ್ಯತ್ಯಯವಾಗಿದೆ.

ಹಾಸನ ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಸುಮಾರು ಒಂದು ತಾಸು ಗುಡುಗು ಸಹಿತ ಉತ್ತಮ ಮಳೆಯಾಗಿದೆ. ಸಕಲೇಶಪುರ ತಾಲ್ಲೂಕಿನ ಯಸಳೂರು ಭಾಗದಲ್ಲಿ ಮನೆ ಹೆಂಚುಗಳು ಹಾರಿ ಹೋಗಿವೆ. ವಡೂರು ಗ್ರಾಮದಲ್ಲಿ ಸಿಡಿಲು ಬಡಿದು ಹಸು ಮೃತಪಟ್ಟಿದೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು