ಶುಕ್ರವಾರ, ಜೂನ್ 25, 2021
21 °C

ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ

ಪ್ರಜಾವಾಣಿವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು–ಸಿಡಿಲು ಆರ್ಭಟದೊಂದಿಗೆ ಸೋಮವಾರ ಉತ್ತಮ ಮಳೆ ಆಗಿದೆ.

ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಧಾರಾಕಾರ ಮಳೆಯಾಗಿದೆ.

ಸಿಡಿಲು ಬಡಿದು ಹಸು, ಎಮ್ಮೆ ಸಾವು: ದಾವಣಗೆರೆ ಜಿಲ್ಲೆಯ ಹಲವೆಡೆ  ಗುಡುಗು, ಸಿಡಿಲು ಸಹಿತ ಉತ್ತಮ ಮಳೆಯಾಗಿದೆ. ವಿಜಯನಗರ ಜಿಲ್ಲೆಯ ಅರಸೀಕೆರೆ ಹೋಬಳಿಯ ಪುಣಭಘಟ್ಟ ಗ್ರಾಮದಲ್ಲಿ ಪ್ರಭು ಅವರಿಗೆ ಸೇರಿದ ಎಮ್ಮೆಗೆ ಸಿಡಿಲು ಬಡಿದು ಮೃತಪಟ್ಟಿದೆ. ಡಗ್ಗಿನ ಬಸಾಪುರ ಗ್ರಾಮದ ಹೊನ್ನಕ್ಕ ಅವರಿಗೆ ಸೇರಿದ ಹಸು ಸಿಡಿಲಿಗೆ ಬಲಿಯಾಗಿದೆ.

ಬಳ್ಳಾರಿಯ ವಿವಿಧೆಡೆ ಉತ್ತಮ ಮಳೆ ಸುರಿಯಿತು. ಕೂಡ್ಲಿಗಿ ತಾಲ್ಲೂಕಿನ ಕಾನಹೊಸಳ್ಳಿ ಸಮೀಪದ ನೆಲಬೊಮ್ಮನಹಳ್ಳಿಯಲ್ಲಿ ಸಿಡಿಲು ಬಡಿದು ಬಾಲರಾಜ್‌ ಅವರ 18 ಮೇಕೆಗಳು ಮೃತಪಟ್ಟಿವೆ. 

ಹಾವೇರಿ, ಗದಗ ಮತ್ತು ಕೊಡಗು ಜಿಲ್ಲೆಗಳ ಹಲವೆಡೆ ಉತ್ತಮ ಮಳೆಯಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು