ಶನಿವಾರ, ಜೂನ್ 19, 2021
27 °C

ರಾಜ್ಯದ ವಿವಿಧೆಡೆ ಗುಡುಗು ಸಹಿತ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಳ್ಳಾರಿ: ಜಿಲ್ಲೆಯ ವಿವಿಧೆಡೆ ಮಂಗಳವಾರ ತಡರಾತ್ರಿ ಹಾಗೂ ಬುಧವಾರ ಬೆಳಗಿನ ಜಾವ ಗುಡುಗು ಸಿಡಿಲಿನೊಂದಿಗೆ ಬಿರುಗಾಳಿ ಸಹಿತ ಮಳೆಯಾಗಿದ್ದು ತೋರಣಗಲ್ಲು ಸಮೀಪದ ತಿಮ್ಮಾಲಾಪುರ ಗ್ರಾಮದಲ್ಲಿ ಎರಡು ಎತ್ತುಗಳು ಬಲಿಯಾಗಿವೆ.

ಸಿರುಗುಪ್ಪ ತಾಲ್ಲೂಕಿನಲ್ಲಿ ಬುಧವಾರ ಬೆಳಗಿನ ಜಾವ 7.3 ಸೆಂ.ಮೀ ಮಳೆಯಾಗಿದೆ. ಮರಿಯಮ್ಮನಹಳ್ಳಿ ಪಟ್ಟಣದ ಹೋಬಳಿ ವ್ಯಾಪ್ತಿಯಲ್ಲಿ ತಡರಾತ್ರಿ ಸುರಿದ ಭಾರಿಗಾಳಿ ಮಳೆಗೆ ಎರಡು ವಿದ್ಯುತ್ ಪರಿವರ್ತಕಗಳು ಸುಟ್ಟಿವೆ.

ಸಿಡಿಲು ಬಡಿದು 2 ಎತ್ತು ಸಾವು: ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಮತ್ತೋಡು ಹೋಬಳಿಯ ಕಪ್ಪನಾಯಕನಹಳ್ಳಿ ಜಮೀನಿನಲ್ಲಿ ಬುಧವಾರ ಬೆಳಿಗ್ಗೆ ಸಿಡಿಲು ಬಡಿದು ರಮೇಶ್‌ ಅವರಿಗೆ ಸೇರಿದ ಎರಡು ಎತ್ತು ಗಳು ಮೃತಪಟ್ಟಿವೆ. ಜಿಲ್ಲೆಯ ವಿವಿಧೆಡೆ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಜಿಲ್ಲೆಯಲ್ಲಿ ಸಾಧಾರಣ ಮಳೆ ಸುರಿದಿದೆ.

ದಡಕ್ಕೆ ಮರಳಲು ಸೂಚನೆ
(ಮಂಗಳೂರು):
ಅರಬ್ಬಿ ಸಮುದ್ರದಲ್ಲಿ ವಾಯು ಭಾರ ಕುಸಿತ ಉಂಟಾಗಿದ್ದು, ‘ತೌಕ್ತೆ’ ಚಂಡಮಾರುತ ಏಳುವ ಸಾಧ್ಯತೆ ಗಳಿವೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.

ಮೇ 16ರ ಸುಮಾರಿಗೆ ಪೂರ್ವ ಮಧ್ಯ ಅರಬ್ಬಿ ಸಮುದ್ರದಲ್ಲಿ ಬಿರುಗಾಳಿ ತೀವ್ರವಾಗಲಿದೆ. ಈ ಹಿನ್ನೆಲೆಯಲ್ಲಿ ಮೀನುಗಾರಿಕೆ ದೋಣಿಗಳು, ಮೀನುಗಾರಿಕೆಗೆ ಇಳಿಯಬಾರದು. ಈಗಾಗಲೇ ಮೀನುಗಾರಿಕೆಗೆ ತೆರಳಿರುವ ದೋಣಿಗಳು ದಡಕ್ಕೆ ಸೇರುವಂತೆ ಕರಾವಳಿ ಕಾವಲು ಪಡೆ ಸೂಚಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು